Publish Date: Sat, 19 Feb 2022 (16:26 IST)
Updated Date: Sat, 19 Feb 2022 (16:28 IST)
ಮುಂಬೈ: ವಿರಾಟ್ ಕೊಹ್ಲಿಯಿಂದ ತೆರವಾದ ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕತ್ವಕ್ಕೂ ರೋಹಿತ್ ಶರ್ಮಾರನ್ನೇ ನಾಯಕರಾಗಿ ನೇಮಕ ಮಾಡಲಾಗಿದೆ.
ಶ್ರೀಲಂಕಾ ವಿರುದ್ಧದ ತವರಿನ ಟೆಸ್ಟ್ ಸರಣಿಗೆ ಆಯ್ಕೆ ಸಮಿತಿ ತಂಡ ಪ್ರಕಟಿಸಿದ್ದು, ರೋಹಿತ್ ಶರ್ಮಾರನ್ನು ನಾಯಕರಾಗಿ ನೇಮಿಸಿದೆ. ಇನ್ನು, ಕಳಪೆ ಫಾರ್ಮ್ ನಲ್ಲಿದ್ದ ಟೆಸ್ಟ್ ಸ್ಪೆಷಲಿಸ್ಟ್ ಗಳಾದ ಅಜಿಂಕ್ಯಾ ರೆಹಾನೆ, ಚೇತೇಶ‍್ವರ ಪೂಜಾರಗೆ ತಂಡದಿಂದ ಕೊಕ್ ನೀಡಲಾಗಿದೆ.
ಲಂಕಾ ಸರಣಿಗೆ ಟೀಂ ಇಂಡಿಯಾ ಇಂತಿದೆ: ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ವಾಲ್, ಪ್ರಿಯಾಂಕ್ ಪಂಚಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಬ್ನಂ ಗಿಲ್, ರಿಷಬ್ ಪಂತ್, ಕೆಎಸ್ ಭರತ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್ (ಫಿಟ್ ಆಗಿದ್ದರೆ ಮಾತ್ರ), ಜಯಂತ್ ಯಾದವ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ (ಉಪ ನಾಯಕ), ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೌರಭ್ ಕುಮಾರ್.