ಮೊಹಾಲಿ: ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ 175 ರನ್ ಗಳಿಸಿದ್ದಾಗ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಡಿಕ್ಲೇರ್ ಘೋಷಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ಪಂದ್ಯದ ಬಳಿಕ ರೋಹಿತ್ ಸ್ಪಷ್ಟನೆ ನೀಡಿದ್ದಾರೆ.
ಪಂದ್ಯ ಮುಕ್ತಾಯದ ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ರೋಹಿತ್ ಶರ್ಮಾ ಇನಿಂಗ್ಸ್ ಡಿಕ್ಲೇರ್ ಮಾಡಿಕೊಳ್ಳುವುದು ನನ್ನ ನಿರ್ಧಾರವಾಗಿರಲಿಲ್ಲ. ಅದು ಸಂಪೂರ್ಣವಾಗಿ ರವೀಂದ್ರ ಜಡೇಜಾ ನಿರ್ಧಾರವಾಗಿತ್ತು. ಅವರೇ ಡಿಕ್ಲೇರ್ ಮಾಡಲು ಸೂಚಿಸಿದರು. ಇದರಿಂದಲೇ ಅವರು ಎಷ್ಟು ನಿಸ್ವಾರ್ಥಿ ಎನ್ನುವುದು ಗೊತ್ತಾಗುತ್ತದೆ ಎಂದಿದ್ದಾರೆ.
ಇನ್ನು, ನಿನ್ನೆಯೇ ರವೀಂದ್ರ ಜಡೇಜಾ ಕೂಡಾ ಡಿಕ್ಲೇರ್ ಮಾಡುವ ನಿರ್ಧಾರ ನನ್ನದಾಗಿತ್ತು ಎಂದು ವಿವಾದಕ್ಕೆ ತೆರೆ ಎಳೆದಿದ್ದರು.