ನವದೆಹಲಿ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾದ ಹಂಗಾಮಿ ನಾಯಕ ರೋಹಿತ್ ಶರ್ಮಾಗೆ ಮಾಜಿ ನಾಯಕ ಸೌರವ್ ಗಂಗೂಲಿ ದಾಖಲೆ ಮುರಿಯುವ ಅವಕಾಶ ಎದುರಾಗಿದೆ.
ರೋಹಿತ್ ಶರ್ಮಾ ಏಕದಿನ ಪಂದ್ಯಗಳಲ್ಲಿ ಇದುವರೆಗೆ 22 ಶತಕ ದಾಖಲಿಸಿದ್ದಾರೆ. ಈ ಮೂಲಕ ಭಾರತದ ಪರ ಅತೀ ಹೆಚ್ಚು ಏಕದಿನ ಶತಕ ಗಳಿಸಿದವರ ಪೈಕಿ ಗಂಗೂಲಿ ಜತೆಗೆ ಮೂರನೇ ಸ್ಥಾನ ಹಂಚಿಕೊಂಡಿದ್ದಾರೆ. 49 ಶತಕ ಗಳಿಸಿರುವ ಸಚಿನ್ ಅಗ್ರ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ 39 ಶತಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ.
ಇದೀಗ ಅಂತಿಮ ಪಂದ್ಯದಲ್ಲಿ ರೋಹಿತ್ ಶತಕ ಗಳಿಸಿದರೆ ಗಂಗೂಲಿ ಹಿಂದಿಕ್ಕಿ ಅತೀ ಹೆಚ್ಚು ಶತಕ ಗಳಿಸಿದವರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಲಿದ್ದಾರೆ. 2007 ರಲ್ಲಿ ಏಕದಿನ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದ ರೋಹಿತ್ ಮೊನ್ನೆಯಷ್ಟೇ 200 ಏಕದಿನ ಪಂದ್ಯವಾಡಿದ ಸಾಧನೆ ಮಾಡಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ