Webdunia - Bharat's app for daily news and videos

Install App

ಚಾಂಪಿಯನ್ಸ್ ಟ್ರೋಫಿ ಗೆದ್ದು ತವರಿಗೆ ಬಂದ ರೋಹಿತ್ ಶರ್ಮಾರನ್ನು ಮುತ್ತಿಕೊಂಡ ಫ್ಯಾನ್ಸ್

Krishnaveni K
ಮಂಗಳವಾರ, 11 ಮಾರ್ಚ್ 2025 (09:28 IST)
Photo Credit: X
ಮುಂಬೈ: ಚಾಂಪಿಯನ್ಸ್ ಟ್ರೋಫಿ ಫೈನಲ್ ಗೆದ್ದು ಪ್ರಶಸ್ತಿ ವಿಜೇತರಾಗಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ತವರಿಗೆ ಬಂದಿಳಿದಿದ್ದಾರೆ. ಈ ವೇಳೆ ಅವರಿಗೆ ಸಿಕ್ಕ ಭವ್ಯ ಸ್ವಾಗತದ ವಿಡಿಯೋ ಇಲ್ಲಿದೆ.

ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್ ಗಳಿಂದ ಸೋಲಿಸಿದ ಟೀಂ ಇಂಡಿಯಾ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಗೆದ್ದುಕೊಂಡ ಸಾಧನೆ ಮಾಡಿತ್ತು. ಇದಾದ ಬಳಿಕ ನಿನ್ನೆ ರಾತ್ರಿಯೇ ನಾಯಕ ರೋಹಿತ್ ಶರ್ಮಾ, ಕೋಚ್ ಗೌತಮ್ ಗಂಭೀರ್ ತವರಿಗೆ ಬಂದಿದ್ದಾರೆ.

ರೋಹಿತ್ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೇ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದು ಅವರನ್ನು ಸ್ವಾಗತಿಸಿದ್ದಾರೆ. ರೋಹಿತ್ ಗೆ ಕಾರು ಹತ್ತಲೂ ಕಷ್ಟವಾಗುವಷ್ಟು ಜನ ಅಲ್ಲಿ ಸೇರಿದ್ದರು. ಎಲ್ಲರತ್ತ ಕೈ ಬೀಸಿ ರೋಹಿತ್ ಕಾರಿನಲ್ಲಿ ತೆರಳಿದ್ದಾರೆ.

ಇನ್ನು ಕೋಚ್ ಗೌತಮ್ ಗಂಭೀರ್ ಕೂಡಾ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಈ ವೇಳೆ ಅವರಿಗೂ ಅಭಿಮಾನಿಗಳು ಮುತ್ತಿಕೊಂಡಿದ್ದಾರೆ. ಇತರೆ ಆಟಗಾರರು ಇನ್ನಷ್ಟೇ ಪ್ರತ್ಯೇಕವಾಗಿ ಭಾರತಕ್ಕೆ ಬಂದಿಳಿಯಲಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಮುಂದಿನ ಸುದ್ದಿ
Show comments