Publish Date: Fri, 11 Feb 2022 (11:53 IST)
Updated Date: Fri, 11 Feb 2022 (11:56 IST)
ಅಹಮ್ಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧ ಇಂದು ನಡೆಯಲಿರುವ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ.
ರೋಹಿತ್ ಶರ್ಮಾ ಏಕದಿನ ಪಂದ್ಯಗಳಲ್ಲಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಧೋನಿ ದಾಖಲೆ ಮುರಿಯಲು ಕೆಲವೇ ಹೆಜ್ಜೆಗಳ ದೂರದಲ್ಲಿದ್ದಾರೆ.
ಇನ್ನು ಆರು ಸಿಕ್ಸರ್ ಸಿಡಿಸಿದರೆ ಏಕದಿನ ಪಂದ್ಯಗಳಲ್ಲಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಧೋನಿ ದಾಖಲೆಯನ್ನು ಮುರಿಯಲಿದ್ದಾರೆ. ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಗೆ ಇಂದು ಸಿಡಿದರೆ ಇದು ಅಸಾಧ‍್ಯವೇನೂ ಅಲ್ಲ.