ಶತಕದ ಬರ ನೀಗಿಸಿಕೊಂಡ ರೋಹಿತ್ ಶರ್ಮಾ: ಶುಬ್ಮನ್ ಗಿಲ್ ಮತ್ತೊಂದು ಶತಕ

Webdunia
ಮಂಗಳವಾರ, 24 ಜನವರಿ 2023 (17:07 IST)
Photo Courtesy: Twitter
ಇಂಧೋರ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ಶುಬ್ಮನ್ ಗಿಲ್ ಶತಕದ ನೆರವಿನಿಂದ ಟೀಂ ಇಂಡಿಯಾ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 385 ರನ್ ಗಳಿಸಿದೆ.

ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ, ಶುಬ್ಮನ್ ಗಿಲ್ ಲೀಲಾಜಾಲವಾಗಿ ಎದುರಾಳಿಗಳ ಎಸೆತವನ್ನು ಚೆಂಡಾಡಿದರು. ರೋಹಿತ್ 51 ಇನಿಂಗ್ಸ್ ಗಳ ಬಳಿಕ ಶತಕ ಬಾರಿಸಿದ್ದು ವಿಶೇಷವಾಗಿತ್ತು. ಒಟ್ಟು 85 ಎಸೆತ ಎದುರಿಸಿದ ಅವರು 101 ರನ್ ಗಳಿಸಿ ಔಟಾದರು. ಅವರ ಜೊತೆಗೇ ಶುಬ್ಮನ್ ಗಿಲ್ ಕೂಡಾ ಮತ್ತೊಂದು ಶತಕ ಸಿಡಿಸಿದರು. ಮೊದಲ ಪಂದ್ಯದಲ್ಲಿ ದ್ವಿಶತಕ ಸಿಡಿಸಿದ್ದ ಅವರು ಈ ಪಂದ್ಯದಲ್ಲಿ 112 ರನ್ ಗಳಿಸಿ ಔಟಾದರು.

ಈ ಇಬ್ಬರೂ ದ್ವಿಶತಕದ ಜೊತೆಯಾಟವಾಡಿದರು. ಇವರಿಬ್ಬರೂ ಔಟಾಗುತ್ತಿದ್ದಂತೇ ಟೀಂ ಇಂಡಿಯಾ ಆಟ ಕಳೆಗುಂದಿತು. ವಿರಾಟ್ ಕೊಹ್ಲಿ ಉತ್ತಮವಾಗಿ ಆಡುತ್ತಿದ್ದರೂ 36 ರನ್ ಗೆ ಔಟಾದರು. ಇಶಾನ್ ಕಿಶನ್ ರನೌಟ್ ಆಗುತ್ತಿದ್ದ ವಿರಾಟ್ ಕೊಹ್ಲಿಯನ್ನು ರಕ್ಷಿಸಲು ತಾವೇ ವಿಕೆಟ್ ಬಲಿದಾನ ಮಾಡಿದರು. ಸೂರ್ಯಕುಮಾರ್ ಯಾದವ್ 14, ವಾಷಿಂಗ್ಟನ್ ಸುಂದರ್ 9 ರನ್ ಗಳಿಸಿ ಔಟಾದರು. ಇದರಿಂದಾಗಿ ಟೀಂ ಇಂಡಿಯಾ ಕೊಂಚ ಹಿನ್ನಡೆ ಅನುಭವಿಸಿತು. ಆದರೆ ಇನ್ನೊಂದೆಡೆ ನಿಂತು ಆಡಿದ ಹಾರ್ದಿಕ್ ಪಾಂಡ್ಯ ಕೇವಲ 38 ಎಸೆತಗಳಿಂದ 54 ರನ್ ಗಳಿಸಿ ಭಾರತದ ಮೊತ್ತವನ್ನು 400 ರ ಸಮೀಪ ತಲುಪಿಸಿದರು. ಹಾರ್ದಿಕ್ ಕೂಡಾ ಫಾರ್ಮ್ ಕಂಡುಕೊಂಡಿದ್ದು ಪ್ಲಸ್ ಪಾಯಿಂಟ್ ಆಯಿತು. ಇದರೊಂದಿಗೆ ಭಾರತ ಮತ್ತೆ 350 ಪ್ಲಸ್ ರನ್ ಗಳಿಸಿದಂತಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಮುಂದಿನ ಸುದ್ದಿ
Show comments