ಜೈಸ್ವಾಲ್, ಸರ್ಫರಾಜ್, ಜ್ಯುರೆಲ್ ಗೆ ರೋಹಿತ್ ಶರ್ಮಾ ಸ್ಪೆಷಲ್ ಗಿಫ್ಟ್

Krishnaveni K
ಸೋಮವಾರ, 19 ಫೆಬ್ರವರಿ 2024 (14:14 IST)
Photo Courtesy: Instagram
ರಾಜ್ ಕೋಟ್: ಇಂಗ್ಲೆಂಡ್ ವಿರುದ್ಧ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಉತ್ತಮ ಆಟ ಪ್ರದರ್ಶಿಸಿದ್ದ ಯಶಸ್ವಿ ಜೈಸ್ವಾಲ್, ಸರ್ಫರಾಜ್ ಖಾನ್ ಮತ್ತು ಧ್ರುವ್ ಜ್ಯುರೆಲ್ ಬಗ್ಗೆ ನಾಯಕ ರೋಹಿತ್ ಶರ್ಮಾ ವಿಶೇಷ ಅಭಿನಂದನೆಯ ಉಡುಗೊರೆ ನೀಡಿದ್ದಾರೆ.

ಸರ್ಫರಾಜ್ ಮತ್ತು ಧ್ರುವ್ ಜ್ಯುರೆಲ್ ಗೆ ಇದು ಚೊಚ್ಚಲ ಪಂದ್ಯವಾಗಿತ್ತು. ಆದರೆ ಇಬ್ಬರೂ ಇದು ಅನುಭವಿಗಳಂತೆ ಆಡಿ ಎಲ್ಲರ ಗಮನ ಸೆಳೆದರು. ಸರ್ಫರಾಜ್ ಎರಡೂ ಇನಿಂಗ್ಸ್ ಗಳಲ್ಲಿ ಅರ್ಧಶತಕ ಸಿಡಿಸಿ ಮಿಂಚಿದರೆ ಧ್ರುವ್ ವಿಕೆಟ್ ಕೀಪಿಂಗ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಅದರಲ್ಲೂ ಧ‍್ರುವ್ ಮಾಡಿದ್ದ ಒಂದು ಅದ್ಭುತ ರನೌಟ್ ಎಲ್ಲರ ಗಮನ ಸೆಳೆದಿತ್ತು.

ಪಂದ್ಯದ ಬಳಿಕ ಮಾತನಾಡಿದ್ದರ ರೋಹಿತ್ ಶರ್ಮಾ ಚೊಚ್ಚಲ ಪಂದ್ಯವಾಡಿದ ಸರ್ಫರಾಜ್ ಬ್ಯಾಟಿಂಗ್ ಬಗ್ಗೆ ವಿಶೇಷವಾಗಿ ಹೊಗಳಿದ್ದರು. ಸರ್ಫರಾಜ್ ತಾಕತ್ತಿನ ಬಗ್ಗೆ ನಮಗೆ ಅರಿವಿದೆ. ಅವರು ಅದನ್ನು ಸರಿಯಾಗಿ ಬಳಸಿಕೊಂಡರು ಎಂದು ಹೊಗಳಿದ್ದರು. ಅಲ್ಲದೆ ದ್ವಿ ಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ ರನ್ನೂ ಕೊಂಡಾಡಿದ್ದರು.

ಇದು ಇಷ್ಟಕ್ಕೇ ನಿಂತಿಲ್ಲ. ಸೋಷಿಯಲ್ ಮೀಡಿಯಾದಲ್ಲೂ ಈ ಮೂವರು ಹುಡುಗರನ್ನು ರೋಹಿತ್ ಕೊಂಡಾಡಿದ್ದಾರೆ. ಸಾಮಾನ್ಯವಾಗಿ ರೋಹಿತ್ ಸೋಷಿಯಲ್ ಮೀಡಿಯಾದಲ್ಲಿ ಇತರೆ ಆಟಗಾರರ ಪ್ರದರ್ಶನದ ಬಗ್ಗೆ ಹೇಳಿಕೊಳ್ಳುವುದು ಕಡಿಮೆ. ಆದರೆ ಈ ಮೂವರೂ ಈ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಸ್ಮರಣೀಯವಾಗಿಸಿದರು. ಹೀಗಾಗಿ ಈ ಮೂವರು ಪ್ರತಿಭಾವಂತರ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿರುವ ರೋಹಿತ್ ಶರ್ಮಾ ‘ಆಜ್ ಕಲ್ ಕಾ ಬಚ್ಚೇ’ ಎಂದು ಹಾಡಿ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಆಸ್ಟ್ರೇಲಿಯಾ ನಡುವೆ ನಾಳೆ ಕೊನೆಯ ಏಕದಿನ: ರೋಹಿತ್, ಕೊಹ್ಲಿ ಫ್ಯಾನ್ಸ್ ಗೆ ಕಾಡ್ತಿದೆ ಭಯ

ಅನುಷ್ಕಾ ಶರ್ಮಾ ಲಂಡನ್‌ ಮೋಹದಿಂದ ವಿರಾಟ್‌ ಕೊಹ್ಲಿಯ ಕ್ರಿಕೆಟ್‌ ಹಾಳಾಯಿತಾ: ನೆಟ್ಟಿಗರ ತರಾಟೆ

ಜಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ ಅವರಿಗೆ ಭಾರತೀಯ ಸೇನೆಯಲ್ಲಿ ವಿಶೇಷ ಹುದ್ದೆ

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

ಮುಂದಿನ ಸುದ್ದಿ
Show comments