ಟೀಂ ಇಂಡಿಯಾಕ್ಕೆ ಬರ್ತಾರೋ ಇಲ್ವೋ ಗೊತ್ತಿಲ್ಲ, ಮುಂಬೈನಲ್ಲಿ ರೋಹಿತ್ ಶರ್ಮಾ ಪ್ರಾಕ್ಟೀಸ್

Krishnaveni K
ಬುಧವಾರ, 13 ನವೆಂಬರ್ 2024 (16:41 IST)
ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಮುಂಬರುವ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಡುವುದು ಇನ್ನೂ ಖಚಿತವಾಗಿಲ್ಲ. ಆದರೆ ಅವರು ಮುಂಬೈನಲ್ಲಿ ಅಭ್ಯಾಸ ಶುರು ಮಾಡಿದ್ದಾರೆ.

ಟೀಂ ಇಂಡಿಯಾ ಕೋಚ್ ಗೌತಮ್ ಗಂಭೀರ್ ನೇತೃತ್ವದಲ್ಲಿ ಈಗಾಗಲೇ ಆಸ್ಟ್ರೇಲಿಯಾ ತಲುಪಿ ಅಭ್ಯಾಸ ಶುರು ಮಾಡಿದೆ. ವಿರಾಟ್ ಕೊಹ್ಲಿ ಎಲ್ಲರಿಗಿಂತ ಮೊದಲೇ ಆಸ್ಟ್ರೇಲಿಯಾ ತಲುಪಿದ್ದಾರೆ. ಆದರೆ ಸೀಕ್ರೆಟ್ ಆಗಿಯೇ ತಂಡದ ಟ್ರೈನಿಂಗ್ ಮಾಡಲಾಗುತ್ತಿದ್ದು, ಯಾರೆಲ್ಲಾ ಭಾಗಿಯಾಗಿದ್ದಾರೆ ಎನ್ನುವುದು ಖಚಿತವಾಗಿಲ್ಲ.

ಇನ್ನೊಂದೆಡೆ ನಾಯಕ ರೋಹಿತ್ ಶರ್ಮಾ ಮೊದಲ ಪಂದ್ಯಕ್ಕೆ ಕೌಟುಂಬಿಕ ಕಾರಣಗಳಿಂದ ಲಭ್ಯರಿರುತ್ತಾರಾ ಎನ್ನುವುದು ಇನ್ನೂ ಪಕ್ಕಾ ಆಗಿಲ್ಲ. ರೋಹಿತ್ ಪತ್ನಿ ರಿತಿಕಾ ಗರ್ಭಿಣಿಯಾಗಿದ್ದು, ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕೆ ಪತ್ನಿಯ ಜೊತೆಗಿರಲು ರೋಹಿತ್ ಮೊದಲ ಟೆಸ್ಟ್ ನಿಂದ ಹೊರಗುಳಿಯುವ ಸಾಧ್ಯತೆಯಿದೆ ಎನ್ನಲಾಗಿದೆ. ಆದರೆ ಇನ್ನೂ ತಮ್ಮ ಅಲಭ್ಯತೆ ಬಗ್ಗೆ ರೋಹಿತ್ ಪಕ್ಕಾ ಸುದ್ದಿ ನೀಡಿಲ್ಲ.

ಇದರ ನಡುವೆ ರೋಹಿತ್ ಮುಂಬೈನಲ್ಲಿ ಅಭ್ಯಾಸ ಶುರು ಮಾಡಿದ್ದಾರೆ. ರೋಹಿತ್ ಬಹುತೇಕ ಪತ್ನಿಯ ಹೆರಿಗೆಯ ಬಳಿಕವಷ್ಟೇ ಆಸ್ಟ್ರೇಲಿಯಾಗೆ ತೆರಳಲಿದ್ದಾರೆ ಎನ್ನಲಾಗಿದೆ. ಹಾಗಿದ್ದರೂ ಯಾವುದೇ ಕ್ಷಣಕ್ಕೂ ರೆಡಿಯಾಗಿರುವಂತೆ ಮುಂಬೈನಲ್ಲಿ ಅಭ್ಯಾಸ ಶುರು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments