Publish Date: Mon, 11 Nov 2024 (08:52 IST)
Updated Date: Mon, 11 Nov 2024 (08:57 IST)
ಮುಂಬೈ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಒಂದು ವೇಳೆ ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯಕ್ಕೆ ಲಭ್ಯರಾದರೂ ಮಗಳನ್ನು ನೋಡಿಕೊಳ್ಳುವ ಸಲುವಾಗಿ ದೊಡ್ಡ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ರೋಹಿತ್ ಶರ್ಮಾ ಪತ್ನಿ ರಿತಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಹೀಗಾಗಿಯೇ ರೋಹಿತ್ ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾಗಿಯಾಗುವುದು ಅನುಮಾನವಾಗಿದೆ. ಅವರ ಸ್ಥಾನದಲ್ಲಿ ಜಸ್ಪ್ರೀತ್ ಬುಮ್ರಾ ತಂಡವನ್ನು ಮುನ್ನಡೆಸಲಿದ್ದಾರೆ.
ಆದರೂ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾಗಿಯಾಗಲು ಸಾಧ್ಯವಾಗುತ್ತದೆಯೇ ಇಲ್ಲವೇ ಎಂಬುದು ರೋಹಿತ್ ಗೆ ಇನ್ನೂ ಸ್ಪಷ್ಟವಾಗಿಲ್ಲ. ಹೀಗಾಗಿ ಅವರು ಒಂದು ವೇಳೆ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾಗಿಯಾದರೂ ಮಗಳನ್ನು ನೋಡಿಕೊಳ್ಳುವ ಸಲುವಾಗಿ ಮತ್ತೆ ಭಾರತಕ್ಕೆ ಮರಳಲಿದ್ದಾರೆ ಎನ್ನಲಾಗಿದೆ.
ಮೊದಲ ಟೆಸ್ಟ್ ಪಂದ್ಯದ ನವಂಬರ್ 26 ರಿಂದ ಆರಂಭವಾಗಲಿದೆ. ದ್ವಿತೀಯ ಟೆಸ್ಟ್ ಪಂದ್ಯ ಡಿಸೆಂಬರ್ 6 ರಿಂದ ಆರಂಭವಾಗುತ್ತಿದೆ. ಈ ಎರಡು ಟೆಸ್ಟ್ ಪಂದ್ಯಗಳ ನಡುವೆ 10 ದಿನಗಳ ಅಂತರವಿದೆ. ಹೀಗಾಗಿ ತಮ್ಮ ಪತ್ನಿ ಮತ್ತು ಮಗಳನ್ನು ನೋಡಿಕೊಳ್ಳುವ ಸಲುವಾಗಿ ರೋಹಿತ್ ಭಾರತಕ್ಕೆ ಮರಳಲಿದ್ದಾರೆ ಎನ್ನಲಾಗಿದೆ.