Publish Date: Tue, 20 Dec 2022 (09:00 IST)
Updated Date: Tue, 20 Dec 2022 (09:12 IST)
ಮುಂಬೈ: ಗಾಯಗೊಂಡು ಟೀಂ ಇಂಡಿಯಾದಿಂದ ಹೊರಬಿದ್ದಿರುವ ಕ್ಯಾಪ್ಟನ್ ರೋಹಿತ್ ಶರ್ಮಾ ಬಾಂಗ್ಲಾದೇಶ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಿಂದಲೂ ಹೊರಗುಳಿಯಲಿದ್ದಾರೆ.
ಬಾಂಗ್ಲಾ ವಿರುದ್ಧ ದ್ವಿತೀಯ ಏಕದಿನ ಪಂದ್ಯದ ವೇಳೆ ರೋಹಿತ್ ಶರ್ಮಾ ಫೀಲ್ಡಿಂಗ್ ಮಾಡುವಾಗ ಕೈ ಹೆಬ್ಬರಳಿಗೆ ಗಾಯ ಮಾಡಿಕೊಂಡಿದ್ದರು. ಇದಾದ ಬಳಿಕ ಅವರು ಮೂರನೇ ಏಕದಿನ ಮತ್ತು ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಿರಲಿಲ್ಲ.
ಇದೀಗ ರೋಹಿತ್ ಮುಂಬೈನಲ್ಲಿದ್ದಾರೆ. ಅವರು ಇನ್ನೂ ಚೇತರಿಸಿಕೊಳ್ಳದ ಕಾರಣ, ಬಾಂಗ್ಲಾಕ್ಕೆ ತೆರಳುತ್ತಿಲ್ಲ ಎನ್ನಲಾಗಿದೆ. ಹೀಗಾಗಿ ಅವರು ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿರಲಿದ್ದಾರೆ.