Publish Date: Thu, 11 Oct 2018 (07:55 IST)
Updated Date: Thu, 11 Oct 2018 (07:57 IST)
ಮುಂಬೈ: ಮುಂಬರುವ ವಿಂಡೀಸ್ ವಿರುದ್ಧದ ಏಕದಿನ ಸರಣಿ, ಆಸ್ಟ್ರೇಲಿಯಾ ಪ್ರವಾಸದ ದೃಷ್ಟಿಯಿಂದ ಇಂದು ಬಿಸಿಸಿಐ ತುರ್ತು ಸಭೆ ಕರೆದಿದೆ.
ಈ ಸಭೆಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜತೆಗೆ ಕೋಚ್ ರವಿಶಾಸ್ತ್ರಿ ಹಾಗೂ ರೋಹಿತ್ ಶರ್ಮಾಗೂ ಬುಲಾವ್ ನೀಡಿದೆ. ಹೀಗಾಗಿ ವಿಂಡೀಸ್ ವಿರುದ್ಧದ ಏಕದಿನ ಸರಣಿಗೆ ಮೊದಲು ಕೊಹ್ಲಿಗೆ ವಿಶ್ರಾಂತಿ ನೀಡಿ ರೋಹಿತ್ ಶರ್ಮಾಗೆ ನಾಯಕತ್ವ ನೀಡುವ ಸಾಧ್ಯತೆಯಿದೆ.
ಇಂದು ವಿಂಡೀಸ್ ಸರಣಿಗೆ ತಂಡದ ಆಯ್ಕೆ ನಡೆಯಲಿದ್ದು, ಧೋನಿಗೆ ವಿಶ್ರಾಂತಿ ನೀಡಿ ಯುವ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಗೆ ಅವಕಾಶ ನೀಡಿದರೂ ಅಚ್ಚರಿಯಿಲ್ಲ. ಮುಂಬರುವ ವಿಶ್ವಕಪ್ ದೃಷ್ಟಿಯಿಂದ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ಸಿಗುವ ಸಾಧ‍್ಯತೆಯಿದೆ. ಈ ನಿಟ್ಟಿನಲ್ಲಿ ಇಂದಿನ ಬಿಸಿಸಿಐ ಸಭೆ ಮಹತ್ವ ಪಡೆದುಕೊಂಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.