ರಣಜಿ ಫೈನಲ್ ನಲ್ಲಿ ಶ್ರೇಯಸ್ ಅಯ್ಯರ್ ಆಟ ನೋಡಲು ಬಂದ ರೋಹಿತ್ ಶರ್ಮಾ

Krishnaveni K
ಬುಧವಾರ, 13 ಮಾರ್ಚ್ 2024 (14:46 IST)
ಮುಂಬೈ: ರಣಜಿ ಟ್ರೋಫಿ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಮುಂಬೈ ಮತ್ತು ವಿದರ್ಭ ಎದುರಾಳಿಯಾಗಿದ್ದು, ಮುಂಬೈ ಗೆಲುವಿನಂಚಿಗೆ ತಲುಪಿದೆ. ಈ ಪಂದ್ಯ ವೀಕ್ಷಿಸಲು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಂದಿದ್ದಾರೆ.

ಟೀಂ ಇಂಡಿಯಾ ಗುತ್ತಿಗೆಯಿಂದ ಹೊರಬಿದ್ದಿರುವ ಶ್ರೇಯಸ್ ಅಯ್ಯರ್ ಇದೀಗ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಮುಂಬೈ ಪರ  ಆಡುತ್ತಿದ್ದಾರೆ. ಮೊದಲ ಇನಿಂಗ್ಸ್ ನಲ್ಲಿ ವಿಫಲರಾಗಿದ್ದ ಅವರು ಎರಡನೇ ಇನಿಂಗ್ಸ್ ನಲ್ಲಿ 95 ರನ್ ಗಳಿಸಿದ್ದರು. ಈ ಮೂಲಕ ತಂಡಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ.

ಶ್ರೇಯಸ್ ಆಡುವುದನ್ನು ನೋಡಲು ಸ್ವತಃ ರೋಹಿತ್ ಶರ್ಮಾ ಮೈದಾನಕ್ಕೆ ಬಂದಿದ್ದಾರೆ. ಶ್ರೇಯಸ್ ಮೈದಾನದಲ್ಲಿ ಬ್ಯಾಟಿಂಗ್ ಮಾಡುತ್ತಿರುವಾಗ ರೋಹಿತ್ ಶರ್ಮಾ ಮುಂಬೈ ನಾಯಕ ಅಜಿಂಕ್ಯಾ ರೆಹಾನೆ ಜೊತೆ ಕುಳಿತು ಆಟದ ಬಗ್ಗೆ ವಿಶ್ಲೇಷಣೆ ನಡೆಸುತ್ತಿದ್ದ ದೃಶ್ಯ ಕಂಡುಬಂದಿದೆ.

ಇತ್ತೀಚೆಗಷ್ಟೇ ಇಂಗ್ಲೆಂಡ್ ವಿರುದ್ಧ 4-1 ಅಂತರದಿಂದ ಟೆಸ್ಟ್ ಸರಣಿ ಗೆದ್ದ ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕಿರು ಬ್ರೇಕ್ ನಲ್ಲಿದ್ದಾರೆ. ಇನ್ನೀಗ ರೋಹಿತ್ ಶರ್ಮಾ ಐಪಿಎಲ್ ಆಡಲು ಮುಂಬೈ ಇಂಡಿಯನ್ಸ್ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಇದಕ್ಕೆ ಮೊದಲು ಅವರು ರಣಜಿ ಫೈನಲ್ ವೀಕ್ಷಿಸಲು ಬಂದಿದ್ದು ವಿಶೇಷವಾಗಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಟೀಂ ಇಂಡಿಯಾ ಸೋಲಿನ ಬಳಿಕ ಕೋಲ್ಕತ್ತಾ ಪಿಚ್ ಬಗ್ಗೆ ಗಂಗೂಲಿ ಹೇಳಿಕೆ ವೈರಲ್

ರಾಹುಲ್ ದ್ರಾವಿಡ್, ರೋಹಿತ್ ಕಟ್ಟಿದ ತಂಡವನ್ನು ಕೆಡವಿದ ಗೌತಮ್ ಗಂಭೀರ್: ನೆಟ್ಟಿಗರ ಛೀಮಾರಿ

IND vs SA 1st Test: ಭಾರತದ ಗೆಲುವಿಗೆ 124 ರನ್‌ಗಳ ಗುರಿ ನೀಡಿದ ದಕ್ಷಿಣ ಆಫ್ರಿಕಾ ತಂಡ

ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದ ವೇಳೆ ಶುಭಮನ್‌ ಗಿಲ್‌ಗೆ ಗಾಯ: ಭಾರತ ತಂಡಕ್ಕೆ ಬಿಗ್‌ಶಾಕ್‌

ಮುಂದಿನ ಸುದ್ದಿ
Show comments