Webdunia - Bharat's app for daily news and videos

Install App

Rohit Sharma: ನೀವಿರುವಾಗ ನಾನು ಮಧ್ಯದಲ್ಲಿ ಕೂರಬೇಕಾ: ಹೃದಯ ಗೆದ್ದ ರೋಹಿತ್ ಶರ್ಮಾ ವಿಡಿಯೋ

Krishnaveni K
ಸೋಮವಾರ, 20 ಜನವರಿ 2025 (11:45 IST)
Photo Credit: X
ಮುಂಬೈ: ನೀವಿರುವಾಗ ನಾನು ಮಧ್ಯದಲ್ಲಿ ಕೂರಬೇಕಾ ಎಂದು ಹಿರಿಯ ಕ್ರಿಕೆಟಿಗರನ್ನು ವೇದಿಕೆಯ ಮಧ್ಯದಲ್ಲಿ ಕೂರಿಸಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ವರ್ತನೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಇಂತಹದ್ದೊಂದು ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮುಂಬೈ ಕ್ರಿಕೆಟ್ ಅಸೋಸಿಯೇಷನ್ 50 ನೇ ವರ್ಷದ ವಾರ್ಷಿಕೋತ್ಸವ ನಿಮಿತ್ತ ನಿನ್ನೆ ವಾಂಖೆಡೆ ಮೈದಾನದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕ್ರಿಕೆಟ್ ದಿಗ್ಗಜರ ಜೊತೆಗೆ ರೋಹಿತ್ ಕೂಡಾ ಭಾಗಿಯಾಗಿದ್ದರು.

ವೇದಿಕೆಯಲ್ಲಿ ಅದಾಗಲೇ ಸಚಿನ್ ತೆಂಡುಲ್ಕರ್, ರವಿಶಾಸ್ತ್ರಿ, ಸುನಿಲ್ ಗವಾಸ್ಕರ್ ಸೇರಿದಂತೆ ಹಲವು ದಿಗ್ಗಜರು ಕೂತಿದ್ದರು. ಈ ವೇಳೆ ರೋಹಿತ್ ಶರ್ಮಾರನ್ನೂ  ವೇದಿಕೆಗೆ ಕರೆಯಲಾಯಿತು. ವೇದಿಕೆಯ ಮಧ್ಯ ಭಾಗದಲ್ಲಿ ಅವರಿಗೆ ಆಸನ ಮೀಸಲಾಗಿತ್ತು.

ಅವರಿಗಿಂತ ಮೊದಲೇ ಅಲ್ಲಿದ್ದ ಸುನಿಲ್ ಗವಾಸ್ಕರ್, ರವಿಶಾಸ್ತ್ರಿಗೆ ಬದಿಯಲ್ಲಿ ಆಸನ ಮೀಸಲಾಗಿತ್ತು. ರವಿಶಾಸ್ತ್ರಿ ಒಂದು ತುದಿಯಲ್ಲಿ ಕೂತಿದ್ದು ನೋಡಿ ರೋಹಿತ್ ಶರ್ಮಾ ಅವರನ್ನು ಅಲ್ಲಿಂದ ಎಬ್ಬಿಸಿ ನೀವು ಮೊದಲು ಮಧ್ಯದಲ್ಲಿ ಕೂತುಕೊಳ್ಳಿ ಎಂದು ಅವರನ್ನು ಮಧ್ಯದಲ್ಲಿ ಕೂರಿಸಿ ಗೌರವಿಸಿದರು. ಅದೇ ರೀತಿ ಚಾಂಪಿಯನ್ಸ್ ಟ್ರೋಫಿ ಪಕ್ಕ ನಿಂತು ಫೋಟೋ ಶೂಟ್ ಮಾಡಿಸಿಕೊಳ್ಳುವಾಗಲೂ ತಮ್ಮನ್ನು ಮಧ್ಯ ನಿಲ್ಲಲು ಕರೆದರೂ ಸುನಿಲ್ ಗವಾಸ್ಕರ್ ಗೆ ಮಧ್ಯದಲ್ಲಿ ನಿಲ್ಲುವಂತೆ ಹೇಳಿ ತಾವು ಮಾತ್ರ ಬದಿಗೆ ನಿಂತರು. ಅವರ ಈ ವರ್ತನೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments