Select Your Language

Notifications

webdunia
webdunia
webdunia
webdunia

ರಾಜ್ಯದ ಕ್ರಿಕೆಟ್ ಆಟಗಾರ್ತಿಯರಿಗೆ 25 ಲಕ್ಷ ರೂ. ಬಹುಮಾನ

ಮಹಿಳಾ ಕ್ರಿಕೆಟ್
ಬೆಂಗಳೂರು , ಶನಿವಾರ, 29 ಜುಲೈ 2017 (18:57 IST)
ಮಹಿಳಾ ವಿಶ್ವಕಪ್ ಕ್ರಿಕೆಟ್‌ನಲ್ಲಿ ಅದ್ಭುತ ಸಾಧನೆ ತೋರಿದ ರಾಜ್ಯದ ಇಬ್ಬರು ಕ್ರಿಕೆಟಿಗರಿಗೆ ರಾಜ್ಯ ಸರಕಾರ 25 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ.
 
ಮಹಿಳಾ ಕ್ರಿಕೆಟ್ ತಂಡಕ್ಕೆ ಅಭಿನಂಧನೆ ಸಲ್ಲಿಸಿದ ಸಚಿವರು, ಮಹಿಳಾ ಕ್ರಿಕೆಟ್ ತಂಡ ವಿಶ್ವಕಪ್‌ನಲ್ಲಿ ಅವಿಸ್ಮರಣೀಯ ಸಾಧನೆ ತೋರಿದೆ ಎಂದು ಸಂತಸ ವ್ಯಕ್ತಪಡಿಸಿದರು.
 
ವಿಜಯಪುರದ ರಾಜೇಶ್ವರಿ ಗಾಯಕ್ವಾಡ್ ಮತ್ತು ಚಿಕ್ಕಮಗಳೂರಿನ ವೇದಾ ಕೃಷ್ಣಮೂರ್ತಿಯವರಿಗೆ ತಲಾ 25 ಲಕ್ಷ ರೂಪಾಯಿ ಬಹುಮಾನವನ್ನು ಯುವಜನ ಸೇವಾ ಕ್ರೀಡಾ ಸಚಿವಾಲಯ ಘೋಷಿಸಿದೆ.
 
ಇಂಗ್ಲೆಂಡ್‌ನ ಲಾರ್ಡ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ವಿರೋಚಿತವಾಗಿ ಹೋರಾಟ ಮಾಡಿದರೂ 9 ರನ್‌ಗಳ ಅಂತರದಿಂದ ಇಂಗ್ಲೆಂಡ್ ವಿರುದ್ಘ ಸೋಲನುಭವಿಸಿತ್ತು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮೊದಲ ಟೆಸ್ಟ್: ಶ್ರೀಲಂಕಾ ವಿರುದ್ಧ ಭಾರತ ಜಯಭೇರಿ