Publish Date: Sat, 12 Oct 2019 (17:19 IST)
Updated Date: Sat, 12 Oct 2019 (17:21 IST)
ಪುಣೆ: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ಅಂತ್ಯಕ್ಕೆ ದ.ಆಫ್ರಿಕಾ ಮೊದಲ ಇನಿಂಗ್ಸ್ ನಲ್ಲಿ 275 ರನ್ ಗಳಿಗೆ ಆಲೌಟ್ ಆಗಿ ಬೃಹತ್ ಹಿನ್ನಡೆ ಅನುಭವಿಸಿದೆ.
ಮೊದಲ ಇನಿಂಗ್ಸ್ ನಲ್ಲಿ ಭಾರತ 601 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ಹೀಗಾಗಿ ಆಫ್ರಿಕಾ 326 ರನ್ ಗಳ ಹಿನ್ನಡೆ ಅನುಭವಿಸಿದೆ. ಇನ್ನೂ ಎರಡು ದಿನಗಳ ಆಟ ಬಾಕಿಯಿದ್ದು ಭಾರತ 150 ರನ್ ಗಳಿಸಿ ಡಿಕ್ಲೇರ್ ಮಾಡಿಕೊಳ್ಳುವ ನಿರೀಕ್ಷೆಯಿದೆ.
ಭಾರತದ ಪರ ರವಿಚಂದ್ರನ್ ಅಶ್ವಿನ್ 4 ವಿಕೆಟ್, ಉಮೇಶ್ ಯಾದವ್ 3, ಮೊಹಮ್ಮದ್ ಶಮಿ 2 ಮತ್ತು ರವೀಂದ್ರ ಜಡೇಜಾ 1 ವಿಕೆಟ್ ಕಬಳಿಸಿದರು. ದ.ಆಫ್ರಿಕಾ ಪರ ಕೇಶವ್ ಮಹಾರಾಜ್ 72 ಮತ್ತು ನಾಯಕ ಫಾ ಡು ಪ್ಲೆಸಿಸ್ 64 ರನ್ ಗಳಿಸಿ ಔಟಾದರು.