Webdunia - Bharat's app for daily news and videos

Install App

99 ಕ್ಕೆ ದ.ಆಫ್ರಿಕಾ ಆಲೌಟ್: ಟೀಂ ಇಂಡಿಯಾ ಗೆಲುವಿಗೆ 100 ರ ಗುರಿ

Webdunia
ಮಂಗಳವಾರ, 11 ಅಕ್ಟೋಬರ್ 2022 (16:25 IST)
ನವದೆಹಲಿ: ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ದ.ಆಫ್ರಿಕಾ ನಡುವಿನ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಆಫ್ರಿಕಾ 99 ರನ್ ಗೆ ಆಲೌಟ್ ಆಗಿದೆ. ಇದೀಗ ಭಾರತಕ್ಕೆ ಗೆಲ್ಲಲು ಭರ್ತಿ 100 ರನ್ ಗಳಿಸಬೇಕಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಫ್ರಿಕಾ ನಿರಂತರವಾಗಿ ವಿಕೆಟ್ ಕಳೆದುಕೊಳ್ಳುತ್ತಲೇ ಸಾಗಿತು. ಹೆನ್ರಿಚ್ ಕ್ಲಾಸನ್ 34 ರನ್ ಗಳಿಸಿದ್ದು ಬಿಟ್ಟರೆ ಉಳಿದ ಯಾವುದೇ ಬ್ಯಾಟಿಗರೂ ನಿಂತು ಆಡುವ ಧೈರ್ಯ ತೋರಲಿಲ್ಲ.  ಜಾನೇಮನ್ ಮಲನ್ 15, ಮ್ಯಾಕ್ರೋ ಜಾನ್ಸನ್ 14 ರನ್ ಗಳಿಸಿದ್ದು ಬಿಟ್ಟರೆ ಉಳಿದೆಲ್ಲಾ ಬ್ಯಾಟಿಗರದ್ದು ಒಂದಂಕಿಯ ಸಾಧನೆ. ಭಾರತದ ಪರ ಕುಲದೀಪ್ ಯಾದವ್ 4, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹಮ್ಮದ್ ತಲಾ 2 ವಿಕೆಟ್  ಕಬಳಿಸಿದರು.

ಇದರೊಂದಿಗೆ ಆಫ್ರಿಕಾ 27.1 ಓವರ್ ಗಳಲ್ಲಿ 99 ರನ್ ಗೆ ಆಲೌಟ್ ಆಯಿತು. ಈ ಮೂಲಕ ಭಾರತದ ವಿರುದ್ಧ ಏಕದಿನ ಪಂದ್ಯದಲ್ಲಿ ಅತ್ಯಂತ ಕನಿಷ್ಠ ಮೊತ್ತ ಗಳಿಸಿದ ಕುಖ್ಯಾತಿಗೊಳಗಾಯಿತು.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments