Publish Date: Thu, 09 Aug 2018 (09:39 IST)
Updated Date: Thu, 09 Aug 2018 (09:41 IST)
ಲಾರ್ಡ್ಸ್: ಇಂಗ್ಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯ ಆಡಲಿರುವ ಟೀಂ ಇಂಡಿಯಾಕ್ಕೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಸಲಹೆ ಕೊಟ್ಟಿದ್ದಾರೆ.
ಆಟಗಾರರ ಆಯ್ಕೆ ವಿಚಾರದಲ್ಲಿ ಕಳೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಸಾಕಷ್ಟು ಟೀಕೆ ಎದುರಿಸಿದ್ದರು. ಹೀಗಾಗಿ ಯಾರ ಸಲಹೆಗೂ ಕಿವಿಗೊಡದೇ ಮುಂದುವರಿಯುವಂತೆ ಸಚಿನ್ ಕಿವಿ ಮಾತು ಹೇಳಿದ್ದಾರೆ.
‘ನೀನು ಒಳ್ಳೆ ಕೆಲಸ ಮಾಡುತ್ತಾ ಇದ್ದೀಯಾ. ಅದನ್ನೇ ಮುಂದುವರಿಸು. ನಿನ್ನ ಸುತ್ತಮುತ್ತ ಏನಾಗುತ್ತಿದೆ ಎನ್ನುವುದರ ಬಗ್ಗೆ ತಲೆಕೆಡಿಸಿಕೊಳ್ಳಬೇಡ. ನಿಮ್ಮ ಗುರಿಯೆಡೆಗೆ ಮಾತ್ರ ಗಮನವಿರಲಿ’ ಎಂದು ತೆಂಡುಲ್ಕರ್ ಸಲಹೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.