Select Your Language

Notifications

webdunia
webdunia
webdunia
webdunia

ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಸಚಿನ್ ತೆಂಡುಲ್ಕರ್ ಗೆ ಆಹ್ವಾನ

Sachin Tendulkar
Photo Courtesy: Twitter
ಮುಂಬೈ: ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಗೆ ಆಹ್ವಾನ ನೀಡಲಾಗಿದೆ.

ದೇಶದ ವಿವಿಧ ಕ್ಷೇತ್ರಗಳ ಗಣ್ಯಾತಿಗಣ್ಯರಿಗೆ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ರಾಮಜನ್ಮಭೂಮಿ ಟ್ರಸ್ಟ್ ವತಿಯಿಂದ ಖುದ್ದಾಗಿ ವಿಶೇಷ ಆಹ್ವಾನ ಪತ್ರಿಕೆ ನೀಡಲಾಗುತ್ತಿದೆ.

ಈಗಾಗಲೇ ಕ್ರಿಕೆಟಿಗ ವಿರಾಟ್ ಕೊಹ್ಲಿ, ನಟ ರಜನೀಕಾಂತ್, ಯಶ್, ರಿಷಬ್ ಶೆಟ್ಟಿ, ಮೋಹನ್ ಲಾಲ್, ಧನುಷ್, ಅಮಿತಾಭ್ ಬಚ್ಚನ್, ನಿಖಿಲ್ ಕುಮಾರಸ್ವಾಮಿ, ಗಾಯಕ ಸೋನು ನಿಗಂ ಸೇರಿದಂತೆ ಅನೇಕ ಗಣ್ಯರಿಗೆ ಆಹ್ವಾನ ಪತ್ರಿಕೆ ನೀಡಲಾಗಿದೆ.

ಇದೀಗ ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಗೆ ಆಹ್ವಾನ ಪತ್ರಿಕೆ ನೀಡಲಾಗಿದೆ. ಜನವರಿ 22 ರಂದು ಅಯೋಧ್ಯೆಯಲ್ಲಿ ಈ ಎಲ್ಲಾ ಗಣ್ಯಾತಿಗಣ್ಯರು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗುವ ನಿರೀಕ್ಷೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

INDvAFG T20I: ವಿರಾಟ್ ಕೊಹ್ಲಿ ಮುಂದಿದೆ 3 ದಾಖಲೆಗಳು