ಬಾರ್ಬಡೋಸ್: ವೆಸ್ಟ್ ಇಂಡೀಸ್ ವಿರುದ್ಧ ದ್ವಿತೀಯ ಏಕದಿನ ಪಂದ್ಯದಲ್ಲಿ ಆಡುವ ಅವಕಾಶ ಪಡೆದೂ ಸಂಜು ಸ್ಯಾಮ್ಸನ್ ಉಪಯೋಗಿಸುವಲ್ಲಿ ವಿಫಲರಾಗಿದ್ದಾರೆ.
ಸಂಜು ಸ್ಯಾಮ್ಸನ್ ಗೆ ಅವಕಾಶ ಸಿಗುತ್ತಿಲ್ಲ ಎಂದು ಅವರ ಅಭಿಮಾನಿಗಳು ಆಕ್ರೋಶಗೊಂಡಿದ್ದರು. ತಂಡದಲ್ಲಿ ಸ್ಥಾನ ಪಡೆದರೂ ಆಡುವ ಬಳಗದಲ್ಲಿ ಅವಕಾಶ ಸಿಗುತ್ತಿರಲಿಲ್ಲ. ಆದರೆ ನಿನ್ನೆಯ ಪಂದ್ಯದಲ್ಲಿ ಅವರಿಗೆ ಆಡುವ ಅವಕಾಶ ಸಿಕ್ಕರೂ ಅದನ್ನು ಬಳಸಿಕೊಳ್ಳುವಲ್ಲಿ ವಿಫಲರಾದರು.
ನಿನ್ನೆಯ ಪಂದ್ಯದಲ್ಲಿ ಅವರು ಗಳಿಸದ್ದು ಕೇವಲ 9 ರನ್. ಸತತ ವಿಕೆಟ್ ಕಳೆದುಕೊಂಡಾಗ ಮಧ‍್ಯಮ ಕ್ರಮಾಂಕದಲ್ಲಿ ತಂಡವನ್ನು ಆಧರಿಸುವಂತ ಇನಿಂಗ್ಸ್ ಆಡುವ ಸುವರ್ಣಾವಕಾಶವೊಂದು ಅವರ ಮುಂದಿತ್ತು. ಆದರೆ ಸಂಜು ಅದರಲ್ಲಿ ವಿಫಲರಾದರು. ಮುಂದಿನ ಪಂದ್ಯದಲ್ಲಿ ಅವರಿಗೆ ಅವಕಾಶ ಸಿಗುವುದು ಅನುಮಾನ.