ಮುಂಬೈ: ಬಾಂಗ್ಲಾದೇಶ ವಿರುದ್ಧ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಆಡುವ ಬಳಗದಲ್ಲಿ ಸ್ಥಾನ ಪಡೆಯುವವರು ಯಾರು ಎಂಬ ಬಗ್ಗೆ ಚರ್ಚೆ ಶುರುವಾಗಿದೆ.
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾದ ತಂಡದಲ್ಲಿ ಸರ್ಫರಾಜ್ ಖಾನ್ ಮತ್ತು ಕೆಎಲ್ ರಾಹುಲ್ ಇಬ್ಬರೂ ಮಧ್ಯಮ ಕ್ರಮಾಂಕದ ಬ್ಯಾಟಿಗರಾಗಿ ಆಡಲಿದ್ದಾರೆ. ಒಂದು ವೇಳೆ ಭಾರತ ತಂಡ ಇಬ್ಬರು ವೇಗಿಗಳು, ಇಬ್ಬರು ಸ್ಪಿನ್ನರ್ ಗಳು ಎಂಬ ತಂತ್ರದೊಂದಿಗೆ ಕಣಕ್ಕಿಳಿದರೆ ಮಾತ್ರ ಸರ್ಫರಾಜ್ ಮತ್ತು ರಾಹುಲ್ ಇಬ್ಬರೂ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ.
ಒಂದು ವೇಳೆ ಭಾರತ ತಂಡ ಹೆಚ್ಚುವರಿ ಬೌಲರ್ ಗೆ ಅವಕಾಶ ನೀಡುವುದಿದ್ದರೆ ಇಬ್ಬರಲ್ಲಿ ಒಬ್ಬರು ಸ್ಥಾನ ತ್ಯಾಗ ಮಾಡಬೇಕಾಗುತ್ತದೆ. ಸರ್ಫರಾಜ್ ಖಾನ್ ಮತ್ತು ಕೆಎಲ್ ರಾಹುಲ್ ಇಬ್ಬರೂ ಇತ್ತೀಚೆಗೆ ನಡೆದ ದುಲೀಪ್ ಟ್ರೋಫಿ ಪಂದ್ಯಾವಳಿಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು.
ಆದರೆ ಅನುಭವದ ವಿಚಾರಕ್ಕೆ ಬಂದರೆ ರಾಹುಲ್ ಹೆಚ್ಚು ಅನುಭವಿ. ಎಷ್ಟೋ ಬಾರಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದ್ದರು. ಹೀಗಾಗಿ ರಾಹುಲ್ ಗೆ ಮೊದಲ ಆದ್ಯತೆ ಸಿಗುವ ಸಾಧ್ಯತೆಯಿದೆ. ಆದರೆ ಆಗ ಪ್ರತಿಭಾವಂತ ಸರ್ಫರಾಜ್ ಖಾನ್ ಸ್ಥಾನ ತ್ಯಾಗ ಮಾಡಬೇಕಾಗಬಹುದು.