Select Your Language

Notifications

webdunia
webdunia
webdunia
webdunia

ಲೈಂಗಿಕ ಕಿರುಕುಳ ಪ್ರಕರಣ: ಆರ್‌ಸಿಬಿ ಆಟಗಾರ ಯಶ್ ದಯಾಳ್‌ಗೆ ತಾತ್ಕಾಲಿಕ ರಿಲೀಫ್‌

Sexual Assault Case, Royal Challengers Bangalore, Bowler Yash Dayal

Sampriya

ಬೆಂಗಳೂರು , ಮಂಗಳವಾರ, 15 ಜುಲೈ 2025 (14:45 IST)
Photo Credit X
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಬೌಲರ್‌ ಯಶ್‌ ದಯಾಳ್‌ ಅವರು ತಾತ್ಕಾಲಿಕ ರಿಲೀಫ್‌ ಪಡೆದಿದ್ದಾರೆ.

ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ದಯಾಳ್ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ.

ಮುಂದಿನ ವಿಚಾರಣೆಯವರೆಗೆ ದಯಾಳ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ನ್ಯಾಯಾಲಯ ನಿರ್ದೇಶಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಪ್ರಶ್ನಿಸಿ ದಯಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ವರ್ಮಾ ಮತ್ತು ಅನಿಲ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

27 ವರ್ಷದ ಯಶ್ ದಯಾಳ್ ವಿರುದ್ಧ ಜುಲೈ 6 ರಂದು ಗಾಜಿಯಾಬಾದ್ ಜಿಲ್ಲೆಯ ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ನ ಸೆಕ್ಷನ್ 69 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಮದುವೆಯ ನೆಪದಲ್ಲಿ ಮಹಿಳೆಯೊಬ್ಬರನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪ ಯಶ್ ದಯಾಳ್ ಮೇಲಿದೆ.

ಸಂತ್ರಸ್ತೆಯು ಆರಂಭದಲ್ಲಿ ಜೂನ್ 21 ರಂದು ಮುಖ್ಯಮಂತ್ರಿಗಳ ಆನ್‌ಲೈನ್ ದೂರು ಪೋರ್ಟಲ್ ಮೂಲಕ ಯಶ್ ದಯಾಳ್ ಅವರ ವಿರುದ್ಧ ದೂರು ಸಲ್ಲಿಸಿದ್ದರು. ನಂತರದಲ್ಲಿ ಎಫ್‌ಐಆರ್‌ ದಾಖಲಾಯಿತು.


Share this Story:

Follow Webdunia kannada

ಮುಂದಿನ ಸುದ್ದಿ

WI vs AUS: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಕನಿಷ್ಠ ಮೊತ್ತಕ್ಕೆ ಔಟಾದ ವೆಸ್ಟ್ ಇಂಡೀಸ್