Publish Date: Sun, 12 Dec 2021 (09:35 IST)
Updated Date: Sun, 12 Dec 2021 (09:37 IST)
ಮುಂಬೈ: ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ವಿಜಯ್ ಹಜಾರೆ ಟ್ರೋಫಿಯಲ್ಲಿ ದಯನೀಯ ವೈಫಲ್ಯ ಅನುಭವಿಸಿದ್ದಾರೆ.
ಇದರಿಂದಾಗಿ ಗಬ್ಬರ್ ಗೆ ದ.ಆಫ್ರಿಕಾ ವಿರುದ್ಧ ನಡೆಯಲಿರುವ ಏಕದಿನ ಸರಣಿಗೆ ತಂಡದಲ್ಲಿ ಸ್ಥಾನ ಸಿಗುವುದೇ ಅನುಮಾನವಾಗಿದೆ.
ದ.ಆಫ್ರಿಕಾ ಸರಣಿಗೆ ಟೆಸ್ಟ್ ತಂಡ ಈಗಾಗಲೇ ಪ್ರಕಟವಾಗಿದೆ. ಆದರೆ ಏಕದಿನ ಸರಣಿಗೆ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಟಗಾರರ ಪ್ರದರ್ಶನ ನೋಡಿಕೊಂಡು ಅವಕಾಶ ನೀಡಲು ಆಯ್ಕೆ ಸಮಿತಿ ನಿರ್ಧರಿಸಿದೆ. ಆದರೆ ದೆಹಲಿ ಪರ ಆಡುವ ಧವನ್ ಜಾರ್ಖಂಡ್, ಹೈದರಾಬಾದ್ ಮತ್ತು ಉತ್ತರ ಪ್ರದೇಶ ನಡುವಿನ ಪಂದ್ಯಗಳಲ್ಲಿ ರನ್ ಗಳಿಸಲು ವಿಫಲರಾಗಿದ್ದಾರೆ. ಹೀಗಾಗಿ ಅವರಿಗೆ ಆಫ್ರಿಕಾ ಟಿಕೆಟ್ ಸಿಗುವುದು ಅನುಮಾನವಾಗಿದೆ.