ಹಾರ್ದಿಕ್ ಪಾಂಡ್ಯಗೆ ತಲೆಬಿಸಿ ತಂದಿಟ್ಟ ಶಿವಂ ದುಬೆ

Krishnaveni K
ಗುರುವಾರ, 28 ಮಾರ್ಚ್ 2024 (12:13 IST)
Photo Courtesy: Twitter
ಚೆನ್ನೈ: ಐಪಿಎಲ್ 2024 ರಲ್ಲೂ ತನ್ನ ಭರ್ಜರಿ ಫಾರ್ಮ್ ಮುಂದುವರಿಸಿರುವ ಯುವ ಆಲ್ ‍ರೌಂಡರ್ ಶಿವಂ ದುಬೆ ಇದೀಗ ಟಿ20 ವಿಶ್ವಕಪ್ ಆಡಲಿರುವ ಟೀಂ ಇಂಡಿಯಾದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳುತ್ತಿದ್ದಾರೆ.

ಶಿವಂ ದುಬೆ ಅದ್ಭುತ ಫಾರ್ಮ್ ಖಂಡಿತವಾಗಿಯೂ ಹಾರ್ದಿಕ್ ಪಾಂಡ್ಯ ನಿದ್ದೆಗೆಡಿಸಲಿದೆ. ಕಳೆದ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಪರ ಹಾರ್ದಿಕ್ ಅನುಪಸ್ಥಿತಿಯಲ್ಲಿ ಶಿವಂ ದುಬೆ ಅದ್ಭುತವಾಗಿ ತನ್ನ ಪಾತ್ರ ನಿಭಾಯಿಸಿದ್ದರು. ಬ್ಯಾಟಿಂಗ್, ಬೌಲಿಂಗ್ ಎರಡರಲ್ಲೂ ಮಿಂಚಿದ್ದು ಟೀಂ ಇಂಡಿಯಾದ ದೊಡ್ಡ ತಲೆನೋವು ನಿವಾರಿಸಿದ್ದರು.

ಇದೀಗ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಅದೇ ಫಾರ್ಮ್ ಮುಂದುವರಿಸಿದ್ದಾರೆ. ಅವರು ಐಪಿಎಲ್ ನಲ್ಲೂ ಇದೇ ರೀತಿ ಆಡುತ್ತಿದ್ದರೆ ಮುಂಬರುವ ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವುದು ಖಚಿತವಾಗಿದೆ. ಇದರ ಜೊತೆಗೆ ಹಾರ್ದಿಕ್ ಪಾಂಡ್ಯ ಮೇಲೆ ಒತ್ತಡ ಬೀಳಲಿದೆ.

ಶಿವಂ ದುಬೆ ಮಿಂಚಿ, ಹಾರ್ದಿಕ್ ಪಾಂಡ್ಯ ಐಪಿಎಲ್ ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡದೇ ಇದ್ದರೆ ಆಯ್ಕೆಗಾರರು ಖಂಡಿತವಾಗಿಯೂ ದುಬೆಗೇ ಮಣೆ ಹಾಕಲಿದ್ದಾರೆ. ಈಗಾಗಲೇ ವಿರಾಟ್ ಕೊಹ್ಲಿಗೇ ಕೊಕ್ ಕೊಡಲು ಸಿದ್ಧರಾಗಿರುವ ಆಯ್ಕೆಗಾರರಿಗೆ ಹಾರ್ದಿಕ್ ರನ್ನು ಹೊರಹಾಕುವುದು ಕಷ್ಟವಾಗಲಾರದು. ಹೀಗಾಗಿ ಶಿವಂ ದುಬೆ, ಈಗ ಹಾರ್ದಿಕ್ ಪಾಂಡ್ಯ ಸ್ಥಾನಕ್ಕೆ ಕುತ್ತು ತರುವ ಲಕ್ಷಣವಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ವಿರಾಟ್ ಕೊಹ್ಲಿ ಅಟೋಗ್ರಾಫ್ ಕೊಟ್ಟಿದ್ದಕ್ಕೆ ಈ ಹುಡುಗ ಹಿಂಗೆಲ್ಲಾ ಮಾಡೋದಾ

ವಿರಾಟ್ ಕೊಹ್ಲಿ ಆರ್ ಸಿಬಿಗೆ ಗುಡ್ ಬೈ ಹೇಳಲ್ಲ: ಮೊಹಮ್ಮದ್ ಕೈಫ್ ನೀಡಿದ ಕಾರಣ ನೋಡಿ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಮುಂದಿನ ಸುದ್ದಿ
Show comments