ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇದು ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನವೇ ಭಾರತ ತಂಡಕ್ಕೆ ಶಾಕ್ ಎದುರಾಗಿದೆ.
ಭಾರತ-ಪಾಕಿಸ್ತಾನ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ ಸಜ್ಜಾಗಿದೆ. ಇಂದು ರಾತ್ರಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ಗೆಲ್ಲುವ ನೆಚ್ಚಿನ ತಂಡವಾಗಿದೆ. ಆದರೆ ತಂಡವಾಗಿ ಹೊರಹೊಮ್ಮಿದೆ. ಈ ಮಧ್ಯೆ ತಂಡದ ಉಪನಾಯಕ ಶುಭಮನ್ ಗಿಲ್ ಅವರು ಗಾಯಗೊಂಡಿದ್ದಾರೆ.
ಭಾರತ – ಪಾಕ್ ಪಂದ್ಯಕ್ಕಾಗಿ ತಾಲೀಮು ನಡೆಸುತ್ತಿದ್ದ ವೇಳೆ ಕೈಗೆ ಬಾಲ್ ಬಡಿದು ಗಿಲ್ ಅವರಿಗೆ ಗಾಯವಾಗಿದೆ. ಇದರಿಂದ ವಿಪರೀತ ನೋವು ಕಾಣಿಸಿಕೊಂಡಿದೆ. ಬಳಿಕ ಅಭ್ಯಾಸ ಸ್ಥಗಿತಗೊಳಿಸಿದ್ದು, ಫಿಸಿಯೋಥೆರಪಿಸ್ಟ್ ತಪಾಸಣೆ ನಡೆಸಿದ್ದಾರೆ. ಇದಾದ ಬಳಿಕ ಮತ್ತೆ ನೆಟ್ಸ್‌ನಲ್ಲಿ ಗಿಲ್ ಬೆವರಿಳಿಸಿದ್ದಾರೆ. ಅವರ ಗಾಯದ ತೀವ್ರತೆ ಗೊತ್ತಾಗಿಲ್ಲ.
ಒಂದು ವೇಳೆ ಇಂದಿನ ಪಂದ್ಯದಲ್ಲಿ ಗಿಲ್ ಹೊರಗುಳಿದರೆ, ಸಂಜು ಸ್ಯಾಮ್ಸನ್ ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ., ಗಿಲ್ ಬದಲಿಗೆ ಜಿತೇಶ್ ಶರ್ಮಾ ಕಣಕ್ಕಿಳಿಯಲಿದ್ದಾರೆ. ಈಚೆಗೆ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದ ಗಿಲ್ ಅವರು ಟಿ20 ತಂಡದಲ್ಲಿ ಉಪನಾಯಕರಾಗಿದ್ದಾರೆ.