ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ಶಾಕ್ ಮೇಲೆ ಶಾಕ್ ಎದುರಾಗಿದೆ. ಮುಂದಿನ ಐಎಪಿಲ್ ಆವೃತ್ತಿಯ ಪಂದ್ಯಗಳು ಬೆಂಗಳೂರಿನಿಂದಲೇ ಎತ್ತಂಗಡಿಯಾಗಲಿವೆ ಎಂಬ ಮಾತು ಕೇಳಿಬಂದಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳೆದ ಆವೃತ್ತಿಯಲ್ಲಿ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡಿತು. ಆದರೆ, ಟ್ರೋಫಿ ಗೆದ್ದ ಖುಷಿ ಒಂದು ದಿನ ಕಳೆಯುವ ಮುನ್ನವೇ ದೊಡ್ಡ ಆವಾಂತರ ನಡೆಯಿತು. ವಿಜಯೋತ್ಸವದ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟರು.
ಸಾಮಾನ್ಯವಾಗಿ ಚಾಂಪಿಯನ್ ಆಗಿ ಹೊರಹೊಮ್ಮಿದ ಫ್ರಾಂಚೈಸಿಗಳ ತವರು ಕ್ರೀಡಾಂಗಣದಲ್ಲಿ ಮರು ವರ್ಷದ ಐಪಿಎಲ್ ಟೂರ್ನಿ ಉದ್ಘಾಟನೆ ನಡೆಯುತ್ತದೆ. ಹಾಗೆಯೇ ಈ ಬಾರಿ ಐಪಿಎಲ್ ಟೂರ್ನಿ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ಆದರೆ, ಚಿನ್ನಸ್ವಾಮಿ ಕ್ರೀಡಾಂಗಣದಿಂದಲೇ ಟೂರ್ನಿ ಎತ್ತಂಗಡಿ ಮಾಡಲಾಗಿದೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಆರ್‌ಸಿಬಿ ತನ್ನ ಎಲ್ಲಾ ತವರು ಪಂದ್ಯಗಳನ್ನ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಆಡುವ ಸಾಧ್ಯತೆಯಿದೆ. ಈ ಕುರಿತು ಎಂಸಿಎ ಕಾರ್ಯದರ್ಶಿ ಕಮಲೇಶ್ ಪೈ ಮಾತನಾಡಿ, ಪುಣೆಯಲ್ಲಿಆರ್‌ಸಿಬಿ ಪಂದ್ಯಗಳನ್ನ ಆಯೋಜಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಇದು ಇನ್ನೂ ಖಚಿತವಾಗಿಲ್ಲ ಎಂದಿದ್ದಾರೆ.