ಆರ್‌ಸಿಬಿ ಅಭಿಮಾನಿಗಳಿಗೆ ಶಾಕ್‌ : ಚಿನ್ನಸ್ವಾಮಿಯಿಂದಲೇ ಪಂದ್ಯಗಳು ಶಿಫ್ಟ್‌ ಸಾಧ್ಯತೆ

Sampriya
ಬುಧವಾರ, 12 ನವೆಂಬರ್ 2025 (15:07 IST)
Photo Credit X
ಮುಂಬೈ: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಅಭಿಮಾನಿಗಳಿಗೆ ಶಾಕ್‌ ಮೇಲೆ ಶಾಕ್‌ ಎದುರಾಗಿದೆ. ಮುಂದಿನ ಐಎಪಿಲ್‌ ಆವೃತ್ತಿಯ ಪಂದ್ಯಗಳು ಬೆಂಗಳೂರಿನಿಂದಲೇ ಎತ್ತಂಗಡಿಯಾಗಲಿವೆ ಎಂಬ ಮಾತು ಕೇಳಿಬಂದಿದೆ. 

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಕಳೆದ ಆವೃತ್ತಿಯಲ್ಲಿ ಚಾಂಪಿಯನ್‌ ಕಿರೀಟ ಮುಡಿಗೇರಿಸಿಕೊಂಡಿತು. ಆದರೆ, ಟ್ರೋಫಿ ಗೆದ್ದ ಖುಷಿ ಒಂದು ದಿನ ಕಳೆಯುವ ಮುನ್ನವೇ ದೊಡ್ಡ ಆವಾಂತರ ನಡೆಯಿತು. ವಿಜಯೋತ್ಸವದ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟರು.

ಸಾಮಾನ್ಯವಾಗಿ ಚಾಂಪಿಯನ್‌ ಆಗಿ ಹೊರಹೊಮ್ಮಿದ ಫ್ರಾಂಚೈಸಿಗಳ ತವರು ಕ್ರೀಡಾಂಗಣದಲ್ಲಿ ಮರು ವರ್ಷದ ಐಪಿಎಲ್‌ ಟೂರ್ನಿ ಉದ್ಘಾಟನೆ ನಡೆಯುತ್ತದೆ. ಹಾಗೆಯೇ ಈ ಬಾರಿ ಐಪಿಎಲ್‌ ಟೂರ್ನಿ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ಆ‌ದರೆ, ಚಿನ್ನಸ್ವಾಮಿ ಕ್ರೀಡಾಂಗಣದಿಂದಲೇ ಟೂರ್ನಿ ಎತ್ತಂಗಡಿ ಮಾಡಲಾಗಿದೆ ಎನ್ನಲಾಗಿದೆ. 

ಮೂಲಗಳ ಪ್ರಕಾರ ಆರ್‌ಸಿಬಿ ತನ್ನ ಎಲ್ಲಾ ತವರು ಪಂದ್ಯಗಳನ್ನ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಆಡುವ ಸಾಧ್ಯತೆಯಿದೆ. ಈ ಕುರಿತು ಎಂಸಿಎ ಕಾರ್ಯದರ್ಶಿ ಕಮಲೇಶ್ ಪೈ ಮಾತನಾಡಿ, ಪುಣೆಯಲ್ಲಿಆರ್‌ಸಿಬಿ ಪಂದ್ಯಗಳನ್ನ ಆಯೋಜಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಇದು ಇನ್ನೂ ಖಚಿತವಾಗಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರ್‌ಸಿಬಿ ಅಭಿಮಾನಿಗಳಿಗೆ ಶಾಕ್‌ : ಚಿನ್ನಸ್ವಾಮಿಯಿಂದಲೇ ಪಂದ್ಯಗಳು ಶಿಫ್ಟ್‌ ಸಾಧ್ಯತೆ

ಪಾಕ್‌ ವೇಗಿ ನಸೀಮ್‌ ಶಾ ಮನೆ ಮೇಲೆ ಗುಂಡಿನ ದಾಳಿ: ಕಾರಣವನ್ನು ಬಿಚ್ಚಿಟ್ಟ ಪೊಲೀಸರು

ದೇಶೀಯ ಕ್ರಿಕೆಟ್ ಆಡಿ ಎಂದು ಆರ್ಡರ್ ಮಾಡಿದ ಬಿಸಿಸಿಐ: ಅದಕ್ಕೂ ರೆಡಿ ಎಂದ ರೋಹಿತ್ ಶರ್ಮಾ

ಇದೇ ಕಾರಣಕ್ಕೆ ನೆಚ್ಚಿನ ಚೆನ್ನೈ ತಂಡವನ್ನೂ ತೊರೆಯಲು ಸಿದ್ಧರಾದ್ರಾ ರವೀಂದ್ರ ಜಡೇಜಾ

ಭಾರತ, ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಸಮಯ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments