ಚಾಂಪಿಯನ್ಸ್‌ ಟ್ರೋಫಿ ಗೆಲುವಿನ ರೂವಾರಿ ಶ್ರೇಯಸ್‌ ಅಯ್ಯರ್‌ಗೆ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಯ ಕಿರೀಟ

Sampriya
ಮಂಗಳವಾರ, 15 ಏಪ್ರಿಲ್ 2025 (20:12 IST)
Photo Courtesy X
ದುಬೈ: ಪಾಕಿಸ್ತಾನದ ಆತಿಥ್ಯದಲ್ಲಿ ಫ್ರೆಬ್ರುವರಿ ಮತ್ತು ಮಾರ್ಚ್‌ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಭಾರತದ ಬ್ಯಾಟರ್‌ ಶ್ರೇಯಸ್‌ ಅವರಿಗೆ ಐಸಿಸಿ ಮಾರ್ಚ್‌ ತಿಂಗಳ ಆಟಗಾರ ಪ್ರಶಸ್ತಿ ಒಲಿದಿದೆ.

30 ವರ್ಷದ ಅಯ್ಯರ್ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ 243 ರನ್ ಹೊಡೆದಿದ್ದರು. ಮಾರ್ಚ್‌ ತಿಂಗಳಲ್ಲಿ 3 ಪಂದ್ಯಗಳಿಂದ 57.33 ಸರಾಸರಿಯಲ್ಲಿ 172 ರನ್ ಗಳಿಸಿದ್ದರು.

ನ್ಯೂಜಿಲೆಂಡ್ ವಿರುದ್ಧ ಚಾಂಪಿಯನ್ಸ್ ಟ್ರೋಫಿ ಎ ಗುಂಪಿನ ಪಂದ್ಯದಲ್ಲಿ ಅವರು 98 ಎಸೆತಗಳಲ್ಲಿ 79 ರನ್ ಗಳಿಸಿದ್ದರು. ಆಸ್ಟ್ರೇಲಿಯಾ ವಿರುದ್ಧ ಸೆಮಿಫೈನಲ್‌ನಲ್ಲಿ 65 ಎಸೆತಗಳಿಂದ 45 ರನ್ ಮತ್ತು ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ 62 ಎಸೆತಗಳಲ್ಲಿ 48 ರನ್ ಗಳಿಸಿ ಸ್ಥಿರ ಆಟ ಪ್ರದರ್ಶಿಸಿದ್ದರು.

.ಪ್ರಶಸ್ತಿಯ ರೇಸ್‌ನಲ್ಲಿ ನ್ಯೂಜಿಲೆಂಡ್‌ನ ಜೇಕಬ್‌ ಡಫಿ ಮತ್ತು ರಚಿನ್ ರವೀಂದ್ರ ಇದ್ದರು. ಅವರನ್ನು ಮೀರಿ ಶ್ರೇಯಸ್‌ ಅಯ್ಯರ್‌ ಪ್ರಶಸ್ತಿ ಗೆದ್ದರು. ಭಾರತ ಸತತ ಎರಡನೇ ತಿಂಗಳು ಈ ಗೌರವಕ್ಕೆ ಪಾತ್ರವಾಗಿದೆ. ಫೆಬ್ರುವರಿ ತಿಂಗಳಲ್ಲಿ ಶುಭಮನ್ ಗಿಲ್ ಈ ಪ್ರಶಸ್ತಿಗೆ ಪಾತ್ರರಾಗಿದ್ದರು.

ಐಸಿಸಿ ಮಾರ್ಚ್‌ ತಿಂಗಳ ಆಟಗಾರ’ ಪ್ರಶಸ್ತಿಗೆ ನನ್ನನ್ನು ಹೆಸರಿಸಿರುವುದು ಸಂತಸ ಮೂಡಿಸಿದೆ. ಅದೂ ನಾವು ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ತಿಂಗಳು ಈ ಗೌರವ ಒಲಿದಿರುವುದು ಎಂದಿಗೂ ಮರೆಯಲಾರೆ ಎಂದು ಅಯ್ಯರ್ ಅವರು ಪ್ರತಿಕ್ರಿಯಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ಮುಂದಿನ ಸುದ್ದಿ
Show comments