Publish Date: Wed, 11 Oct 2023 (09:40 IST)
Updated Date: Wed, 11 Oct 2023 (09:45 IST)
ಚೆನ್ನೈ: ಡೆಂಗ್ಯೂ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಟೀಂ ಇಂಡಿಯಾ ಕ್ರಿಕೆಟಿಗ ಶುಬ್ಮನ್ ಗಿಲ್ ಈಗ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾಗುತ್ತಿದ್ದಾರೆ.
ಟೀಂ ಇಂಡಿಯಾ ಜೊತೆಗೆ ಚೆನ್ನೈಗೆ ಬಂದಿದ್ದ ಗಿಲ್ ಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಮೊದಲ ಪಂದ್ಯದಲ್ಲಿ ಆಡಿರಲಿಲ್ಲ. ಬಳಿಕ ಪ್ಲ್ಯಾಟ್ ಲೆಟ್ ಕಡಿಮೆಯಿದ್ದ ಹಿನ್ನಲೆಯಲ್ಲಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ ಅವರು ತಂಡದ ಜೊತೆಗೆ ದೆಹಲಿಗೆ ಪ್ರಯಾಣಿಸಿರಲಿಲ್ಲ.
ಇದೀಗ ಗುಣಮುಖರಾದ ಹಿನ್ನಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹಾಗಿದ್ದರೂ ಅಕ್ಟೋಬರ್ 14 ರಂದು ಪಾಕಿಸ್ತಾನ ವಿರುದ್ಧ ನಡೆಯಲಿರುವ ಪಂದ್ಯದಲ್ಲೂ ಅವರು ಆಡುತ್ತಾರಾ ಎನ್ನುವುದು ಇನ್ನೂ ಖಚಿತವಾಗಿಲ್ಲ.