Publish Date: Mon, 09 Oct 2023 (19:15 IST)
Updated Date: Mon, 09 Oct 2023 (19:24 IST)
ನವದೆಹಲಿ: ಡೆಂಗ್ಯೂ ಜ್ವರದಿಂದ ಬಳಲುತ್ತಿರುವ ಟೀಂ ಇಂಡಿಯಾ ಆರಂಭಿಕ ಶುಬ್ಮನ್ ಗಿಲ್ ಏಕದಿನ ವಿಶ್ವಕಪ್ ಕೂಟದ ಮೊದಲ ಪಂದ್ಯದಲ್ಲಿ ಆಡಿರಲಿಲ್ಲ.
ಮೊದಲ ಪಂದ್ಯಕ್ಕೆ ಎರಡು ದಿನ ಮೊದಲು ಗಿಲ್ ಗೆ ಡೆಂಗ್ಯೂ ಜ್ವರ ತಗುಲಿತ್ತು. ಹೀಗಾಗಿ ಅವರು ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಿಂದ ಹೊರಗುಳಿದಿದ್ದರು.
ಇದೀಗ ಮುಂದಿನ ಪಂದ್ಯಕ್ಕೂ ಅವರು ಅಲಭ್ಯರಾಗಲಿದ್ದಾರೆ ಎಂದು ತಿಳಿದುಬಂದಿದೆ. ಬುಧವಾರದಂದು ನಡೆಯಲಿರುವ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಿಂದಲೂ ಗಿಲ್ ಹೊರಗುಳಿಯಲಿದ್ದಾರೆ. ಅವರ ಸ್ಥಾನದಲ್ಲಿ ಕಳೆದ ಪಂದ್ಯದಲ್ಲಿ ಇಶಾನ್ ಕಿಶನ್ ಆರಂಭಿಕರಾಗಿ ಕಣಕ್ಕಿಳಿದಿದ್ದರು.