Publish Date: Tue, 23 Jan 2018 (08:50 IST)
Updated Date: Tue, 23 Jan 2018 (08:52 IST)
ಜೊಹಾನ್ಸ್ ಬರ್ಗ್: ದ.ಆಫ್ರಿಕಾ ವಿರುದ್ಧ ಮಾನ ಉಳಿಸಿಕೊಳ್ಳಲು ಟೀಂ ಇಂಡಿಯಾಕ್ಕೆ ಏಕೈಕ ಟೆಸ್ಟ್ ಪಂದ್ಯ ಬಾಕಿಯಿದ್ದು, ಅದನ್ನು ಗೆದ್ದು ನಂ.1 ಪಟ್ಟ ಉಳಿಸಿಕೊಳ್ಳುವ ಒತ್ತಡದಲ್ಲಿದೆ.
ಈ ಹಿನ್ನಲೆಯಲ್ಲಿ ಭಾರೀ ತಯಾರಿ ಮಾಡಿಕೊಳ್ಳುತ್ತಿರುವ ಟೀಂ ಇಂಡಿಯಾ ಆಟಗಾರರನ್ನೂ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.
ಅಜಿಂಕ್ಯಾ ರೆಹಾನೆಯನ್ನು ಆಡಿಸದೇ ವಿರಾಟ್ ಕೊಹ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದಾರೆ. ಇದೀಗ ಎರಡೂ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಕಂಡ ಮೇಲೆ ಕೊಹ್ಲಿ ಹೆಚ್ಚುವರಿ ಬ್ಯಾಟ್ಸ್ ಮನ್ ಆಗಿ ರೆಹಾನೆಯನ್ನು ತಂಡದೊಳಕ್ಕೆ ಕರೆಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಇದಕ್ಕೆ ಸರಿಯಾಗಿ ರೆಹಾನೆ ಕೂಡಾ ನೆಟ್ಸ್ ನಲ್ಲಿ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ರೆಹಾನೆಗಾಗಿ ಯಾರು ಸ್ಥಾನ ಬಿಟ್ಟುಕೊಡುತ್ತಾರೆ ಎಂಬ ಅಂತಿಮ ಇಲೆವೆನ್ ಕುತೂಹಲ ಕೊನೆಯವರೆಗೂ ಉಳಿಯಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ