Publish Date: Wed, 14 Sep 2022 (09:30 IST)
Updated Date: Wed, 14 Sep 2022 (09:41 IST)
ಡರ್ಬಿ: ಭಾರತ ಮತ್ತು ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ನಡುವೆ ನಡೆದ ಟಿ20 ಪಂದ್ಯದಲ್ಲಿ ಭಾರತ ವನಿತೆಯರು 8 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 142 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಭಾರತಕ್ಕೆ ನೆರವಾಗಿದ್ದು ಸ್ಮೃತಿ ಮಂಧನಾ ಅಬ್ಬರದ ಬ್ಯಾಟಿಂಗ್.
ಕೇವಲ 53 ಎಸೆತಗಳಲ್ಲಿ 79 ರನ್ ಚಚ್ಚಿದ ಮಂಧನಾ ಕೊನೆಯವರೆಗೂ ಅಜೇಯರಾಗುಳಿದರು. ಅವರಿಗೆ ತಕ್ಕ ಸಾಥ್ ನೀಡಿದ ಶಫಾಲಿ ವರ್ಮ 20 ರನ್ ಗಳಿಸಿ ಔಟಾದರೆ ನಾಯಕಿ ಹರ್ಮನ್ ಪ್ರೀತ್ ಕೌರ್ ಅಜೇಯ 29 ರನ್ ಗಳ ಕೊಡುಗೆ ನೀಡಿದರು. ಇದರೊಂದಿಗೆ ಭಾರತ 16.4 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 146 ರನ್ ಗಳಿಸಿ ಭರ್ಜರಿ ಗೆಲುವು ಸಂಪಾದಿಸಿತು.