ಮುಂಬೈ: ಮಹಿಳಾ ಏಕದಿನ ವಿಶ್ವಕಪ್ ಗೆದ್ದ ಭಾರತ ತಂಡದ ಉಪನಾಯಕಿ ಸ್ಮೃತಿ ಮಂದಾನ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಜೊತೆಗೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಕ್ರಿಕೆಟ್ ತಾರೆ ಸ್ಮೃತಿ ಮಂದಾನ ಮದುವೆ ಸಂಭ್ರಮದಲ್ಲಿ ತೇಲುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರ ವಿವಾಹ ಪೂರ್ವ ಕಾರ್ಯಕ್ರಮಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿವೆ. ಈಗ ಸ್ಮೃತಿ ಮತ್ತು ಪಲಾಶ್ ಮಸ್ತ್ ಡ್ಯಾನ್ಸ್ ಮಾಡಿರುವ ವಿಡಿಯೋವೊಂದು ವೈರಲ್ ಆಗಿದೆ.
ಅರಿಶಿನ ಶಾಸ್ತ್ರದ ಆಚರಣೆಯ ವೀಡಿಯೊಗಳಿಂದ ಹಿಡಿದು ವರ ಮತ್ತು ವಧುವಿನ ನೇತೃತ್ವದ ತಂಡಗಳ ನಡುವಿನ ಸೌಹಾರ್ದ ಕ್ರಿಕೆಟ್ ಪಂದ್ಯದವರೆಗಿನ ಕೆಲವು ಮೋಡಿಮಾಡುವ ವಿಡಿಯೋಗಳು ಸಾಕಷ್ಟು ಗಮನ ಸೆಳೆದಿವೆ.
ಪಲಾಶ್ ಅವರ ಕುತ್ತಿಗೆಗೆ ಸ್ಮೃತಿ ಹಾರ ಹಾಕುವುದನ್ನು ವೀಡಿಯೊದಲ್ಲಿ ಕಾಣಬಹುದು. ನಂತರ ಪಲಾಶ್ ಭಾರತೀಯ ಮಹಿಳಾ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಮುಂದೆ ನಮಸ್ಕರಿಸುತ್ತಾರೆ.
ಈಚೆಗೆ ಹಳದಿ ಶಾಸ್ತ್ರದಲ್ಲಿ ಶಫಾಲಿ ವರ್ಮಾ, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ರೇಣುಕಾ ಸಿಂಗ್, ಶಿವಾಲಿ ಶಿಂಧೆ, ರಾಧಾ ಯಾದವ್ ಮತ್ತು ಜೆಮಿಮಾ ರೊಡ್ರಿಗಸ್ ಸೇರಿದಂತೆ ಹಲವು ಆಟಗಾರ್ತಿಯರು ಭಾಗಿಯಾಗಿ ಡಾನ್ಸ್ ಮಾಡಿದ್ದರು.