Publish Date: Sun, 09 Sep 2018 (10:01 IST)
Updated Date: Sun, 09 Sep 2018 (10:02 IST)
ದಿ ಓವಲ್: ಭಾರತ ಮತ್ತುಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಲ್ಲಿ ತಾವು ಮಾಡಿರುವ ತಪ್ಪುಗಳನ್ನು ಒಪ್ಪಿಕೊಳ್ಳುವ ಒಳ್ಳೆ ಗುಣ ನಾಯಕ ವಿರಾಟ್ ಕೊಹ್ಲಿಯಲ್ಲಿದೆ. ಆದರೆ ಕೋಚ್ ರವಿಶಾಸ್ತ್ರಿಗಿಲ್ಲ ಎಂದು ಮಾಜಿ ನಾಯಕ ಸೌರವ್ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.
ಖಾಸಗಿ ವಾಹಿನಿಯೊಂದರ ಚರ್ಚಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಒಬ್ಬ ನಾಯಕನಾಗಿ ಸೋಲಿಗೆ ಹೊಣೆ ಹೊತ್ತುಕೊಳ್ಳುವ ಮೂಲಕ ಕೊಹ್ಲಿ ನಿಜವಾದ ನಾಯಕನ ಗುಣವೇನೆಂದು ತೋರಿಸಿಕೊಟ್ಟಿದ್ದಾರೆ. ಆದರೆ ರವಿಶಾಸ್ತ್ರಿ ಮಾಜಿ ಕ್ರಿಕೆಟಿಗರೊಂದಿಗೆ ಈ ತಂಡದ ಆಟಗಾರರನ್ನು ಹೋಲಿಸುತ್ತಾ ತಮ್ಮ ತಪ್ಪುಗಳನ್ನು ಸಮರ್ಥಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ’ ಎಂದು ಗಂಗೂಲಿ ಹೇಳಿದ್ದಾರೆ.
ಇಂಗ್ಲೆಂಡ್ ವಿರುದ್ಧ ಸರಣಿ ಸೋತ ಟೀಂ ಇಂಡಿಯಾವನ್ನು ಟೀಕಿಸಿದ ಮಾಜಿ ಕ್ರಿಕೆಟಿಗರ ಸಾಧನೆಯನ್ನೇ ರವಿಶಾಸ್ತ್ರಿ ಪ್ರಶ್ನಿಸಿದ್ದರು. ಇದಕ್ಕೆ ಗಂಗೂಲಿ ಈ ರೀತಿ ತಿರುಗೇಟು ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.