ಕೋಲ್ಕೊತ್ತಾ: ಕೊರೋನಾ ಸೋಂಕಿತರಾಗಿ ಆಸ್ಪತ್ರೆ ಸೇರಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಇದೀಗ ಡಿಸ್ಚಾರ್ಜ್ ಆಗಿದ್ದಾರೆ.
ಹಾಗಿದ್ದರೂ ಅವರಿನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಮುಂದಿನ ಚಿಕಿತ್ಸೆ ಅವರಿಗೆ ಮನೆಯಲ್ಲಿಯೇ ನಡೆಯಲಿದೆ ಎಂದು ತಿಳಿದುಬಂದಿದೆ. ಕಳೆದ ವಾರ ಗಂಗೂಲಿ ಕೊರೋನಾ ಪಾಸಿಟಿವ್ ಆಗಿ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.
ಎರಡನೇ ಬಾರಿಗೆ ಗಂಗೂಲಿಗೆ ಕೊರೋನಾ ಪಾಸಿಟಿವ್ ಆಗಿದ್ದು, ಸೌಮ್ಯ ಲಕ್ಷಣಗಳಿತ್ತು. ಇದೀಗ ಗಂಗೂಲಿ ಮನೆಯಲ್ಲಿಯೇ ಐಸೋಲೇಟ್ ಆಗಿ ಚಿಕಿತ್ಸೆ ಪಡೆಯಲಿದ್ದಾರೆ.