Select Your Language

Notifications

webdunia
webdunia
webdunia
Wednesday, 9 April 2025
webdunia

ವಿರಾಟ್ ಕೊಹ್ಲಿ ರಾಜೀನಾಮೆ ನಿರ್ಧಾರದ ಬಗ್ಗೆ ಸೌರವ್ ಗಂಗೂಲಿ ಪ್ರತಿಕ್ರಿಯೆ

ವಿರಾಟ್ ಕೊಹ್ಲಿ
ಮುಂಬೈ , ಶುಕ್ರವಾರ, 17 ಸೆಪ್ಟಂಬರ್ 2021 (10:20 IST)
ಮುಂಬೈ: ಟೀಂ ಇಂಡಿಯಾ ಟಿ20 ನಾಯಕತ್ವಕ್ಕೆ ವಿರಾಟ್ ಕೊಹ್ಲಿ ರಾಜೀನಾಮೆ ನೀಡಿದ ಬಗ್ಗೆ ಬಿಸಿಸಿಐ ಅಧ‍್ಯಕ್ಷ ಸೌರವ್ ಗಂಗೂಲಿ ಪ್ರತಿಕ್ರಿಯೆ ನೀಡಿದ್ದಾರೆ.


ಭವಿಷ್ಯದ ದೃಷ್ಟಿಯಿಂದ ವಿರಾಟ್ ಕೊಹ್ಲಿ ರಾಜೀನಾಮೆ ನಿರ್ಧಾರ ಸ್ವಾಗತಾರ್ಹ ಎಂದು ಗಂಗೂಲಿ ಪ್ರತಿಕ್ರಿಯೆ ನೀಡಿದ್ದಾರೆ. ರಾಜೀನಾಮೆ ಬಗ್ಗೆ ಪ್ರಕಟಣೆಯಲ್ಲಿ ಕೊಹ್ಲಿ ಕೋಚ್ ರವಿಶಾಸ್ತ್ರಿ, ರೋಹಿತ್ ಶರ್ಮಾ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಕಾರ್ಯದರ್ಶಿ ಜಯ್ ಶಾ ಜೊತೆ ಚರ್ಚಿಸಿರುವುದಾಗಿ ಹೇಳಿದ್ದರು.

‘ವಿರಾಟ್ ಕೊಹ್ಲಿ ಎಲ್ಲಾ ಮೂರೂ ಮಾದದರಿಯಲ್ಲಿ ಭಾರತದ ಅತ್ಯಂತ ಯಶಸ್ವೀ ನಾಯಕ. ಆದರೆ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಅವರು ರಾಜೀನಾಮೆ ನೀಡಿದ್ದಾರೆ. ಅವರು ಈ ವಿಶ್ವಕಪ್ ಗೆಲ್ಲಲಿ ಎಂದು ಶುಭ ಹಾರೈಸುತ್ತೇನೆ’ ಎಂದು ಗಂಗೂಲಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರೋಹಿತ್ ಶರ್ಮಾ ಕ್ಯಾಪ್ಟನ್, ಕೆಎಲ್ ರಾಹುಲ್ ಉಪನಾಯಕ?