Webdunia - Bharat's app for daily news and videos

Install App

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

Sampriya
ಭಾನುವಾರ, 24 ಆಗಸ್ಟ್ 2025 (21:23 IST)
Photo Credit X
ಮುಂಬೈ: ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ ಮಾಜಿ ಅಧ್ಯಕ್ಷ, ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಹೊಸ ಇನಿಂಗ್ಸ್‌ ಆರಂಭಿಸಿದ್ದಾರೆ.

ಗಂಗೂಲಿ ಅವರು ದಕ್ಷಿಣ ಆಫ್ರಿಕಾದ ಎಸ್‌ಎ20 ಲೀಗ್‌ನಲ್ಲಿ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ. ಇದೇ ಮೊದಲ ಬಾರಿಗೆ ಸೌರವ್ ಗಂಗೂಲಿ ಮುಖ್ಯ ಕೋಚ್ ಆಗಿ ತಂಡವೊಂದಕ್ಕೆ ತರಬೇತಿ ನೀಡಲಿದ್ದಾರೆ.

ಈ ಹಿಂದೆ ಬಿಸಿಸಿಐ ಅಧ್ಯಕ್ಷ ಹುದ್ದೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದ ಸೌರವ್ ಗಂಗೂಲಿ ಶೀಘ್ರದಲ್ಲೇ ದೊಡ್ಡ ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್ ಹುದ್ದೆಗೇರಲಿದ್ದಾರೆ. ಅಂದರೆ ಇದೇ ಮೊದಲ ಬಾರಿಗೆ ಸೌರವ್ ಗಂಗೂಲಿ ಮುಖ್ಯ ಕೋಚ್ ಆಗಿ ತಂಡವೊಂದಕ್ಕೆ ತರಬೇತಿ ನೀಡಲಿದ್ದಾರೆ.

ಇತ್ತೀಚೆಗಷ್ಟೇ ಸೌರವ್ ಗಂಗೂಲಿ ಟೀಂ ಇಂಡಿಯಾದ ಕೋಚ್ ಆಗುವ ಬಯಕೆಯನ್ನು ವ್ಯಕ್ತಪಡಿಸಿದರು. ನಾನು ಭಾರತೀಯ ತಂಡದ ಕೋಚ್ ಆಗಲು ಸಿದ್ಧನಿದ್ದೇನೆ ಎಂದು ಅವರು ಹೇಳಿದ್ದರು. ಅದಕ್ಕೆ ಪೂರ್ವಭಾವಿಯಾಗಿ ಈ ಹೆಜ್ಜೆಯನ್ನು ಇಟ್ಟಿದ್ದಾರೆ ಎನ್ನಲಾಗಿದೆ.

ವಾಸ್ತವವಾಗಿ ದಕ್ಷಿಣ ಆಫ್ರಿಕಾದ ಟಿ20 ಲೀಗ್ ಎಸ್‌ಎ20 ನ ಮುಂಬರುವ ಸೀಸನ್‌ನಲ್ಲಿ ಪ್ರಿಟೋರಿಯಾ ಕ್ಯಾಪಿಟಲ್ಸ್‌ನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ಅವರನ್ನು ನೇಮಕ ಮಾಡಲಾಗಿದೆ. ವೃತ್ತಿಪರ ಕ್ರಿಕೆಟ್ ತಂಡದೊಂದಿಗೆ ಗಂಗೂಲಿಯ ಮೊದಲ ಪೂರ್ಣ ಸಮಯದ ತರಬೇತಿ ಅನುಭವ ಇದಾಗಿದೆ.

 ಕಳೆದ ಆವೃತ್ತಿಯಲ್ಲಿ ತಂಡದ ಉಸ್ತುವಾರಿ ವಹಿಸಿಕೊಂಡಿದ್ದ ಇಂಗ್ಲೆಂಡ್‌ನ ಮಾಜಿ ಬ್ಯಾಟ್ಸ್‌ಮನ್ ಜೊನಾಥನ್ ಟ್ರಾಟ್ ಕೋಚ್ ಹುದ್ದೆಯಿಂದ ಕೆಳಗಿಳಿದ ಒಂದು ದಿನದ ನಂತರ ಗಂಗೂಲಿ ಅವರ ನೇಮಕವಾಗಿದೆ. ಮುಂಬರುವ ಆವೃತ್ತಿ 26 ಡಿಸೆಂಬರ್ 2025 ರಿಂದ 25 ಜನವರಿ 2026 ರವರೆಗೆ ನಡೆಯಲಿದೆ.  <>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದಿಂದ ಸ್ಪಷ್ಟನೆ ಕೇಳಿದ ಬೆನ್ನಲ್ಲೇ ಐಪಿಎಲ್‌ಗೆ ರವಿಚಂದ್ರನ್‌ ಅಶ್ವಿನ್ ಗುಡ್‌ಬೈ

ಪಿಟಿ ಉಷಾ ಮಗನ ಮದುವೆ ಊಟಕ್ಕೆ ಫಿದಾ ಆದ ಮೇರಿ ಕೋಮ್‌

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ಮುಂದಿನ ಸುದ್ದಿ
Show comments