Select Your Language

Notifications

webdunia
webdunia
webdunia
webdunia

ಬಿಸಿಸಿಐಯಿಂದ ಹೊರಬಿದ್ದ ಸೌರವ್ ಗಂಗೂಲಿ ಈಗ ಮತ್ತೆ ಐಪಿಎಲ್ ತಂಡಕ್ಕೆ!

ಸೌರವ್ ಗಂಗೂಲಿ
ನವದೆಹಲಿ: ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಹೊರಬಂದ ಸೌರವ್ ಗಂಗೂಲಿ ಈಗ ಕೆಲವು ದಿನಗಳ ಬಳಿಕ ಮತ್ತೆ ಸುದ್ದಿಯಲ್ಲಿದ್ದಾರೆ.

ಬಿಸಿಸಿಐ ಅಧ್ಯಕ್ಷರಾಗುವ ಮೊದಲು ಗಂಗೂಲಿ ಐಪಿಎಲ್ ನ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಿರ್ದೇಶಕರಾಗಿದ್ದರು. ಇದೀಗ ಗಂಗೂಲಿ ಮತ್ತೆ ಡೆಲ್ಲಿ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಮತ್ತೆ ಗಂಗೂಲಿ ಡೆಲ್ಲಿ ತಂಡದ ಕ್ರಿಕೆಟ್ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ಡೆಲ್ಲಿ ತಂಡದ ಕೋಚ್ ಆಗಿದ್ದಾರೆ. ಹೀಗಾಗಿ ಮತ್ತೆ ಗಂಗೂಲಿ, ಪಾಂಟಿಂಗ್ ಜೊತೆಯಾಗಿ ಕಾರ್ಯನಿರ್ವಹಿಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಧೋನಿಯಂತೆ ಅಚ್ಚರಿಯ ನಿರ್ಧಾರ ತೆಗೆದುಕೊಂಡು ಕ್ಲಿಕ್ ಆದ ಹಾರ್ದಿಕ್ ಪಾಂಡ್ಯ