ಶ್ರೀಶಾಂತ್, ಹರ್ಭಜನ್ ಸಿಂಗ್ ರ ಆ ವಿಡಿಯೋ 17 ವರ್ಷಗಳ ಬಳಿಕ ಬಿಡುಗಡೆಯಾಯ್ತು

Krishnaveni K
ಶುಕ್ರವಾರ, 29 ಆಗಸ್ಟ್ 2025 (16:23 IST)
Photo Credit: X
ಮುಂಬೈ: ಐಪಿಎಲ್ ನಲ್ಲಿ ಕೆಲವು ವರ್ಷಗಳ ಹಿಂದೆ ಶ್ರೀಶಾಂತ್ ಗೆ ಹರ್ಭಜನ್ ಸಿಂಗ್ ಕಪಾಳ ಮೋಕ್ಷ ಮಾಡಿದ ಘಟನೆ ಭಾರೀ ಸುದ್ದಿಯಾಗಿತ್ತು. ಈ ವಿಡಿಯೋ ಈಗ 17 ವರ್ಷಗಳ ಬಳಿಕ ಲಲಿತ್ ಮೋದಿ ಬಿಡುಗಡೆ ಮಾಡಿದ್ದಾರೆ.

ಸದ್ಯಕ್ಕೆ ಲಂಡನ್ ನಿವಾಸಿಯಾಗಿರುವ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಸಂದರ್ಶನವೊಂದರಲ್ಲಿ ಈ ಘಟನೆ ಬಗ್ಗೆ ಮಾತನಾಡಿದ್ದಾರೆ. ಅಂದು ಏನಾಯ್ತು ಎಂದು ಹೇಳಿದ್ದಾರೆ. ಜೊತೆಗೆ ವಿಡಿಯೋವೊಂದನ್ನೂ ಬಿಡುಗಡೆ ಮಾಡಿದ್ದಾರೆ.

ಇದರಲ್ಲಿ ನಿಜವಾಗಿಯೂ ಅಂದು ಏನಾಯ್ತು ಎಂಬುದರ ಸ್ಪಷ್ಟ ದೃಶ್ಯವಿದೆ. ಅವತ್ತು ಶ್ರೀಶಾಂತ್ ಗೆ ಭಜಿ ಹೊಡೆದಿದ್ದು ನಿಜ ಎಂದು ಲಲಿತ್ ಮೋದಿ ಹೇಳಿದ್ದಾರೆ. ಆಗ ಭಜಿ ಮುಂಬೈ ಪರ, ಶ್ರೀಶಾಂತ್ ಪಂಜಾಬ್ ಪರ ಆಡುತ್ತಿದ್ದರು. ಪಂದ್ಯ ಮುಗಿದ ಬಳಿಕ ಉಭಯ ತಂಡಗಳ ಆಟಗಾರರು ಶೇಕ್ ಹ್ಯಾಂಡ್ ಮಾಡುತ್ತಿದ್ದರು.

ಶ್ರೀಶಾಂತ್ ರನ್ನು ಭಜಿ ಹತ್ತಿರಕ್ಕೆ ಕರೆಯುತ್ತಾರೆ. ಬಳಿಕ ಕೈ ತಿರುಗಿಸಿ ಒಂದು ಏಟು ಹೊಡೆದೇ ಬಿಡುತ್ತಾರೆ ಎಂದು ಲಲಿತ್ ಮೋದಿ ಹೇಳಿದ್ದಾರೆ. ಈ ಘಟನೆಯ ನಿಜವಾದ ವಿಡಿಯೋ ಈಗಲೂ ನನ್ನ ಬಳಿಯಿದೆ. ಅದನ್ನು ನಾನು ನಿಮಗೆ ತೋರಿಸುತ್ತೇನೆ ಎಂದು ಸಂದರ್ಶನದಲ್ಲಿ ಲಲಿತ್ ಮೋದಿ ಹೇಳಿದ್ದಾರೆ. ಆ ವಿಡಿಯೋ ಈಗ ರಿಲೀಸ್ ಆಗಿದ್ದು ಇಲ್ಲಿದೆ ನೋಡಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಖತ್ ಫನ್ನಿಯಾಗಿ ಎಂಗೇಜ್ ಮೆಂಟ್ ವಿಷ್ಯ ಹೊರಹಾಕಿದ ಸ್ಮೃತಿ ಮಂಧಾನ Video

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಮುಂದಿನ ಸುದ್ದಿ
Show comments