ಕೋಲ್ಕೊತ್ತಾ: ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್ ಗಳ ಸಂಘಟಿತ ದಾಳಿಗೆ ತತ್ತರಿಸಿದ ಶ್ರೀಲಂಕಾ 39.4 ಓವರ್ ಗಳಲ್ಲಿ 215 ರನ್ ಗಳಿಗೆ ಆಲೌಟ್ ಆಗಿದೆ.
ಇಂದಿನ ಪಂದ್ಯದಲ್ಲಿ ಗಾಯಗೊಂಡ ಯಜುವೇಂದ್ರ ಚಾಹಲ್ ಸ್ಥಾನಕ್ಕೆ ಕುಲದೀಪ್ ಯಾದವ್ ತಂಡಕ್ಕೆ ಆಗಮಿಸಿದ್ದರು. ಈ ಬದಲಾವಣೆ ಭಾರತಕ್ಕೆ ವರವಾಯಿತು. ಕುಲದೀಪ್ ಯಾದವ್ ಲಂಕಾದ ಪ್ರಮುಖ ಮೂರು ವಿಕೆಟ್ ಕಬಳಿಸಿದರು. ಈ ನಡುವೆ ನುವಾನಿಂದ್ ಫರ್ನಾಂಡೋ 50 ಕುಸಾಲ್ ಮೆಂಡಿಸ್ 34, ದುನಿತ್ ವೆಲ್ಲಲಾಗೆ 32 ರನ್ ಗಳಿಸಿದರು.
ಭಾರತದ ಪರ ಮೊಹಮ್ಮದ್ ಸಿರಾಜ್ 3, ಉಮ್ರಾನ್ ಮಲಿಕ್ 2, ಅಕ್ಸರ್ ಪಟೇಲ್ 1 ವಿಕೆಟ್ ಕಬಳಿಸಿದರು. ಒಂದು ಹಂತದಲ್ಲಿ 1 ವಿಕೆಟ್ ನಷ್ಟಕ್ಕೆ 102 ರನ್ ಗಳಿಸಿ ಸುಸ್ಥಿತಿಯಲ್ಲಿದ್ದ ಲಂಕಾ ಮುಂದೆ 24 ರನ್ ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತು. ಮಧ‍್ಯಮ ಕ್ರಮಾಂಕದಲ್ಲಿ ಭಾರತದ ಬೌಲರ್ ಗಳು ಎದುರಾಳಿಗಳ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸಿದ್ದರು. ಇದೀಗ ಭಾರತ ಗೆಲುವಿಗೆ 216 ರನ್ ಗಳಿಸಬೇಕಿದೆ.