Webdunia - Bharat's app for daily news and videos

Install App

ಸ್ಟಾರ್‌ ಆಲ್‌ರೌಂಡರ್‌ ಏಕದಿನ ಕ್ರಿಕೆಟ್‌ಗೆ ದಿಢೀರ್‌ ನಿವೃತ್ತಿ ಘೋಷಣೆ: ಸ್ವಾರ್ಥಕ್ಕಾಗಿ ಆಡಲ್ಲ ಎಂದಿದ್ಯಾಕೆ

Sampriya
ಸೋಮವಾರ, 2 ಜೂನ್ 2025 (14:15 IST)
Photo Courtesy X
ಮೆಲ್ಬರ್ನ್‌: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಕಳೆದ ಐಪಿಎಲ್‌ನಲ್ಲಿ ಪ್ರತಿನಿಧಿಸಿದ್ದ ಆಸ್ಟ್ರೇಲಿಯಾ ತಂಡದ ಸ್ಟಾರ್‌ ಆಲ್‌ರೌಂಡರ್‌ ಗ್ಲೆನ್‌ ಮ್ಯಾಕ್ಸ್‌ವೆಲ್‌ ಏಕದಿನ ಕ್ರಿಕೆಟ್‌ಗೆ ದಿಢೀರ್‌ ನಿವೃತ್ತಿ ಘೋಷಣೆ ಮಾಡಿದ್ದಾರೆ. 

2023ರ ವಿಶ್ವಕಪ್‌ ಟೂರ್ನಿಯಲ್ಲಿ ಅಫ್ಗಾನಿಸ್ತಾನ ವಿರುದ್ಧ ಗಾಯದ ನಡುವೆ ಅಮೋಘ ದ್ವಿಶತಕ ದಾಖಲಿಸಿ ಆಸ್ಟ್ರೇಲಿಯಾ ತಂಡವು  6ನೇ ವಿಶ್ವಕಪ್‌ ಗೆಲ್ಲಲು ಪ್ರಮುಖ ಕಾರಣರಾಗಿದ್ದ ಈ ಆಟಗಾರನ ನಿರ್ಧಾರಕ್ಕೆ ಕ್ರೀಡಾವಲಯದಲ್ಲಿ ಅಚ್ಚರಿ ವ್ಯಕ್ತವಾಗಿದೆ. 36 ವರ್ಷದ ಮ್ಯಾಕ್ಸ್‌ವೆಲ್‌, ಆಸ್ಟ್ರೇಲಿಯಾ ತಂಡದ ಪರ 149 ಪಂದ್ಯಗಳಲ್ಲಿ ಆಡಿದ್ದಾರೆ. 4 ಶತಕ, 23 ಅರ್ಧಶತಕ ಸಹಿತ 3,990 ರನ್‌ ಮತ್ತು 77 ವಿಕೆಟ್‌ ಗಳಿಸಿದ್ದಾರೆ.

ಮುಂದಿನ ವರ್ಷ ಭಾರತ ಮತ್ತು ಶ್ರೀಲಂಕಾ ಆತಿಥ್ಯದಲ್ಲಿಟಿ20 ವಿಶ್ವಕಪ್‌ ಟೂರ್ನಿ ನಡೆಯಲಿದೆ. ಈ ಟೂರ್ನಿಯನ್ನು ಗಮನದಲ್ಲಿರಿಸಿಕೊಂಡು ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಅಲ್ಲದೆ,  ಸ್ವಾರ್ಥಕ್ಕಾಗಿ ಆಡಲು ಬಯಸುವುದಿಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. 

2023ರ ವಿಶ್ವಕಪ್‌ ಟೂರ್ನಿಯಲ್ಲಿ ಅಫ್ಗನ್‌ ವಿರುದ್ಧ ಗಾಯದ ಸಮಸ್ಯೆಯಿಂದ ಬಳಲುತ್ತಲೇ ಏಕದಿನ ಮಾದರಿಯಲ್ಲಿ ಚೊಚ್ಚಲ ದ್ವಿಶಕದ ಸಾಧನೆ ಮಾಡಿದ್ದ ಮ್ಯಾಕ್ಸ್‌ವೆಲ್‌, ತಮ್ಮ ತಂಡವನ್ನು ಸೆಮಿಫೈನಲ್‌ಗೆ ಮುನ್ನಡೆಸಿದ್ದರು. ಇದು, ಏಕದಿನ ಕ್ರಿಕೆಟ್‌ನಲ್ಲಿ ಶ್ರೇಷ್ಠ ಇನಿಂಗ್ಸ್‌ ಎನಿಸಿಕೊಂಡಿದೆ. ಒಟ್ಟು 128 ಎಸೆತಗಳನ್ನು ಎದುರಿಸಿ ಮ್ಯಾಕ್ಸಿ ಬರೋಬ್ಬರಿ 201 ರನ್ ಗಳಿಸಿ ಅಜೇಯವಾಗಿ ಉಳಿದರು. ಅವರ ಆಟದ ಬಲದಿಂದ ಕಾಂಗರೂ ಪಡೆ ಇನ್ನೂ 19 ಎಸೆತ ಬಾಕಿ ಇರುವಂತೆಯೇ ಜಯ ಸಾಧಿಸಿತು.

ಮ್ಯಾಕ್ಸ್‌ವೆಲ್‌ ಅವರು ಏಕದಿನ ಮಾದರಿಯಲ್ಲಿ 126ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸುತ್ತಾರೆ. ಇದು, ವೆಸ್ಟ್ ಇಂಡೀಸ್‌ನ ಆ್ಯಂಡ್ರೆ ರಸೆಲ್ ನಂತರ ಎರಡನೇ ಅತ್ಯುತ್ತಮ ಸ್ಟ್ರೈಕ್‌ರೇಟ್‌ ಆಗಿದೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments