Publish Date: Sun, 15 Jul 2018 (08:46 IST)
Updated Date: Sun, 15 Jul 2018 (08:49 IST)
ಮುಂಬೈ: ಇಂಗ್ಲೆಂಡ್ ವಿರುದ್ಧ ಕಿರು ಮಾದರಿಯ ಕ್ರಿಕೆಟ್ ನಲ್ಲಿ ಕುಲದೀಪ್ ಯಾದವ್ ಮತ್ತು ರೋಹಿತ್ ಶರ್ಮಾ ಭರ್ಜರಿ ಪ್ರದರ್ಶನದ ನಂತರ ಈ ಇಬ್ಬರೂ ಆಟಗಾರರನ್ನು ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಲು ಒತ್ತಡ ಹೆಚ್ಚಿದೆ.
ಮೊನ್ನೆಯಷ್ಟೇ ಸ್ವತಃ ವಿರಾಟ್ ಕೊಹ್ಲಿ, ಕುಲದೀಪ್ ಯಾದವ್ ಟೆಸ್ಟ್ ತಂಡಕ್ಕೆ ಆಯ್ಕೆಯಾಗುವ ಬಗ್ಗೆ ಮಾತನಾಡಿದ್ದರು. ಸ್ವತಃ ಕುಲದೀಪ್ ತಮಗೂ ಈ ಆಸೆಯಿರುವುದಾಗಿ ಹೇಳಿಕೊಂಡಿದ್ದರು.
ಇದೀಗ ಬ್ಯಾಟಿಂಗ್ ದಿಗ್ಗಜ ಸುನಿಲ್ ಗವಾಸ್ಕರ್ ಕೂಡಾ ಇದೇ ಮಾತು ಹೇಳಿದ್ದಾರೆ. ಇಬ್ಬರೂ ಅತ್ಯುತ್ತಮ ಫಾರ್ಮ್ ನಲ್ಲಿದ್ದಾರೆ. ಟೆಸ್ಟ್ ತಂಡಕ್ಕೆ ಇಬ್ಬರನ್ನೂ ಆಯ್ಕೆ ಮಾಡಲು ಇದೇ ಸೂಕ್ತ ಕಾಲ ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.