Publish Date: Sat, 03 Sep 2022 (08:20 IST)
Updated Date: Sat, 03 Sep 2022 (08:51 IST)
ದುಬೈ: ಈ ಬಾರಿ ಏಷ್ಯಾ ಕಪ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಮುಂಬರುವ ಟಿ20 ವಿಶ್ವಕಪ್ ನಲ್ಲಿ ಸ್ಥಾನ ಸಿಗುವುದು ಬಹುತೇಕ ಖಚಿತ.
ಈ ನಿಟ್ಟಿನಲ್ಲಿ ಸೂರ್ಯಕುಮಾರ್ ಯಾದವ್ ಟಿ20 ವಿಶ್ವಕಪ್ ಗೆ ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ. ಹಾಂಗ್ ಕಾಂಗ್ ವಿರುದ್ಧ ಅವರು ಆಡಿದ ಸಿಡಿಲಬ್ಬರದ ಬ್ಯಾಟಿಂಗ್ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಗಮನ ಸೆಳೆದಿದೆ.
ಮಧ್ಯಮ ಕ್ರಮಾಂಕದಲ್ಲಿ ಅಗತ್ಯಕ್ಕೆ ತಕ್ಕಂತೆ ತನ್ನ ಬ್ಯಾಟಿಂಗ್ ಗೇರ್ ಬದಲಾಯಿಸುವ ಸೂರ್ಯಕುಮಾರ್ ಯಾದವ್ ಟಿ20 ವಿಶ್ವಕಪ್ ನಲ್ಲಿ ಭಾರತದ ಪಾಲಿಗೆ ಪ್ರಮುಖ ಆಟಗಾರನಾಗಲಿದ್ದಾರೆ.