ಗೆಲುವಿನ ಬಳಿಕ ಪಾಕಿಸ್ತಾನಕ್ಕೇ ಬಿಸಿ ಮುಟ್ಟಿಸುವಂತಹ ಹೇಳಿಕೆ ನೀಡಿದ ಸೂರ್ಯಕುಮಾರ್ ಯಾದವ್

Krishnaveni K
ಸೋಮವಾರ, 15 ಸೆಪ್ಟಂಬರ್ 2025 (08:59 IST)
Photo Credit: X
ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದ ಬಳಿಕ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಸಾಂಪ್ರದಾಯಿಕ ಎದುರಾಳಿ ರಾಷ್ಟ್ರ ಮುಟ್ಟಿ ನೋಡಿಕೊಳ್ಳುವಂತಹ ಹೇಳಿಕೆ ನೀಡಿದ್ದಾರೆ.

ಈ ಪಂದ್ಯಕ್ಕೆ ಭಾರತೀಯರು ಬಹುತೇಕ ಬಹಿಷ್ಕಾರ ಹಾಕಿದ್ದರು. ಪಹಲ್ಗಾಮ್ ನಲ್ಲಿ ಪಾಕ್ ಪ್ರೇರಿತ ಉಗ್ರರು ದಾಳಿ ನಡೆಸಿ ಭಾರತೀಯ ಮಹಿಳೆಯರ ಸಿಂಧೂರ ಅಳಿಸಿದ್ದರು. ಈ ರೋಷಾಗ್ನಿ ಭಾರತೀಯರಲ್ಲಿತ್ತು. ಈ ಕಾರಣಕ್ಕೆ ಪಾಕಿಸ್ತಾನ ಜೊತೆ ಕ್ರಿಕೆಟ್ ಆಡಬಾರದು ಎಂದು ಪಹಲ್ಗಾಮ್ ನಲ್ಲಿ ಪ್ರಾಣ ಕಳೆದುಕೊಂಡಿದ್ದವರ ಕುಟುಂಬದವರೂ ಆಗ್ರಹಿಸಿದ್ದರು.

ಹಾಗಿದ್ದರೂ ಅನಿವಾರ್ಯವಾಗಿ ಭಾರತ ಈ ಪಂದ್ಯವನ್ನು ಆಡಬೇಕಾಗಿ ಬಂತು. ಆದರೆ ಈ ಪಂದ್ಯಕ್ಕೆ ಬಹುತೇಕರು ಬಹಿಷ್ಕಾರ ಹಾಕಿದ್ದರು. ಹೀಗಾಗಿ ಪಂದ್ಯದ ಬಳಿಕ ಸೂರ್ಯಕುಮಾರ್ ಯಾದವ್ ಈ ಗೆಲುವನ್ನು ದೇಶಕ್ಕೇ ಸಮರ್ಪಿಸಿದ್ದಾರೆ.

‘ನಾನೊಂದು ವಿಚಾರ ಹೇಳಬೇಕು. ಈ ಗೆಲುವು ನಮಗೆ ವಿಶೇಷವಾಗಿದೆ. ಪಹಲ್ಗಾಮ್ ದಾಳಿಯಲ್ಲಿ ಸಂತ್ರಸ್ತರಾದವರ ಕುಟುಂಬದವರ ಜೊತೆ ನಾವು ನಿಲ್ಲುತ್ತೇವೆ. ನಾವು ಅವರ ಜೊತೆಗಿದ್ದೇವೆ. ನಾವು ಈ ಗೆಲುವನ್ನು ನಮ್ಮ ಸಶಸ್ತ್ರ ಪಡೆಗೆ ಅರ್ಪಿಸುತ್ತೇವೆ. ಅವರು ನಮಗೆ ಸ್ಪೂರ್ತಿ, ಮುಂದೆಯೂ ಅವರ ಮುಖದಲ್ಲಿ ನಗು ಮೂಡಿಸುವಂತಹ ಕ್ಷಣಗಳನ್ನು ಮೈದಾನದಲ್ಲಿ ಇನ್ನಷ್ಟು ನೀಡುತ್ತೇವೆ ಎಂದು ಭರವಸೆ ನೀಡುತ್ತಿದ್ದೇನೆ’ ಎಂದಿದ್ದಾರೆ. ಆ ಮೂಲಕ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಷಬ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌, ಗಾಯದಿಂದ ಚೇತರಿಸಿಕೊಂಡ ಪಂತ್‌ಗೆ ಬಿಸಿಸಿಐ ಹೊಸ ಜವಾಬ್ದಾರಿ

ವೇತನ ಮಾತ್ರ ಪುರುಷರಷ್ಟೇ ಬೇಕು, ಪರ್ಫಾರ್ಮೆನ್ಸ್ ಝೀರೋ: ಟ್ರೋಲ್ ಆದ ಮಹಿಳಾ ಕ್ರಿಕೆಟಿಗರು

Women World Cup: ಇಂಗ್ಲೆಂಡ್‌ ವಿರುದ್ಧ ಸೋತ ಭಾರತಕ್ಕೆ ಸೆಮಿಫೈನಲ್‌ ಹಾದಿ ಕಠಿಣ

Ind Vs Aus ODI: ಹಿಟ್‌ಮ್ಯಾನ್‌, ಕಿಂಗ್‌ಕೊಹ್ಲಿ ತಂಡಕ್ಕೆ ವಾಪಾಸ್ಸಾದರು ನಡೆಯದ ಮ್ಯಾಜಿಕ್‌

ಸ್ಟಾರ್‌ ಬ್ಯಾಟರ್‌ ಸ್ಮೃತಿ ಮಂದಾನ ಶೀಘ್ರದಲ್ಲೇ ಹಣೆಮಣೆಗೆ: ಇಂದೋರ್‌ನ ಸೊಸೆ ಎಂದಿದ್ಯಾರು ಗೊತ್ತಾ

ಮುಂದಿನ ಸುದ್ದಿ
Show comments