Daily Horoscope
✕

ಸೂರ್ಯಕುಮಾರ್ ಯಾದವ್ ಫಿಟ್ನೆಸ್ ಬಗ್ಗೆ ಲೇಟೆಸ್ಟ್ ಅಪ್ ಡೇಟ್

Krishnaveni K
ಶುಕ್ರವಾರ, 29 ಮಾರ್ಚ್ 2024 (11:40 IST)
Photo Courtesy: Twitter
ಮುಂಬೈ: ಹರ್ನಿಯಾ ಶಸ್ತ್ರಚಿಕಿತ್ಸೆಗೊಳಗಾಗಿರುವುದರಿಂದ ಐಪಿಎಲ್ ನಿಂದ ಹೊರಗುಳಿದಿರುವ ಮುಂಬೈ ಇಂಡಿಯನ್ಸ್ ಬ್ಯಾಟಿಗ ಸೂರ್ಯಕುಮಾರ್ ಯಾದವ್ ಫಿಟ್ನೆಸ್ ಬಗ್ಗೆ ಲೇಟೆಸ್ಟ್ ಅಪ್ ಡೇಟ್ ಒಂದು ಬಂದಿದೆ.

ಸೂರ್ಯಕುಮಾರ್ ಯಾದವ್ ಕಳೆದ ವಿಶ್ವಕಪ್ ಬಳಿಕ ನಡೆದ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಟೀಂ ಇಂಡಿಯಾದ ನಾಯಕರಾಗಿದ್ದರು. ಕೊನೆಯ ಪಂದ್ಯದಲ್ಲಿ ಪಾದ ಟ್ವಿಸ್ಟ್ ಮಾಡಿಕೊಂಡಿದ್ದ ಸೂರ್ಯ ಕ್ರಿಕೆಟ್ ನಿಂದ ದೂರವುಳಿದರು. ಅದರ ಬೆನ್ನಲ್ಲೇ ಅವರಿಗೆ ಹರ್ನಿಯಾ ಸಮಸ್ಯೆ ಕಾಣಿಸಿಕೊಂಡಿದ್ದು, ಅದಕ್ಕೆ ಶಸ್ತ್ರಚಿಕಿತ್ಸೆ ಮಾಡಿಕೊಂಡಿದ್ದಾರೆ.

ಸದ್ಯಕ್ಕೆ ಅವರು ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಎನ್ ಸಿಎ ತಜ್ಞರು ಫಿಟ್ನೆಸ್ ಸರ್ಟಿಫಿಕೇಟ್ ನೀಡುವವರೆಗೆ ಅವರಿಗೆ ಐಪಿಎಲ್ ನಲ್ಲಿ ಆಡಲು ಸಾಧ‍್ಯವಿಲ್ಲ. ಸೂರ್ಯ ಫಿಟ್ನೆಸ್ ಬಗ್ಗೆ ಅಪ್ ಡೇಟ್ ನೀಡಿರುವ ಬಿಸಿಸಿಐ ಮೂಲಗಳು, ಅವರು ಬೇಗನೇ ಚೇತರಿಸಿಕೊಳ್ಳುತ್ತಿದ್ದು ಸದ್ಯದಲ್ಲೇ ತಂಡಕ್ಕೆ ವಾಪಸ್ ಆಗಲಿದ್ದಾರೆ ಎಂದಿವೆ.

ಸದ್ಯಕ್ಕೆ ಮುಂಬೈ ಇಂಡಿಯನ್ಸ್ ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ಇದೀಗ ಟಿ20 ಸ್ಪೆಷಲಿಸ್ಟ್ ಸೂರ್ಯಕುಮಾರ್ ನಂತಹ ಬ್ಯಾಟಿಗರ ಅಗತ್ಯ ತಂಡಕ್ಕಿದೆ. ಹೀಗಾಗಿ ಅವರು ಆದಷ್ಟು ಬೇಗ ಚೇತರಿಸಿಕೊಂಡು ತಂಡಕ್ಕೆ ಮರಳುವುದು ಅಗತ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments