ಸಿಡ್ನಿ: ಫೀಲ್ಡಿಂಗ್ ಮಾಡುವಾಗ ಗಾಯಗೊಂಡು ಸಿಡ್ನಿಯ ಆಸ್ಪತ್ರೆಗೆ ದಾಖಲಾಗಿರುವ ಟೀಂ ಇಂಡಿಯಾ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಬಗ್ಗೆ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಮಹತ್ವದ ಅಪ್ ಡೇಟ್ ನೀಡಿದ್ದಾರೆ.
ನಾಳೆಯಿಂದ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಆರಂಭವಾಗುವ ಹಿನ್ನಲೆಯಲ್ಲಿ ಸೂರ್ಯಕುಮಾರ್ ಯಾದವ್ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಅವರಿಗೆ ಶ್ರೇಯಸ್ ಆರೋಗ್ಯ ಸ್ಥಿತಿ ಬಗ್ಗೆ ಪ್ರಶ್ನಿಸಲಾಯಿತು.
ಇದಕ್ಕೆ ಉತ್ತರಿಸಿದ ಅವರು ಶ್ರೇಯಸ್ ಗೆ ಹೀಗಾಯ್ತು ಎಂದು ಗೊತ್ತಾದ ತಕ್ಷಣ ನಾನು ಅವರಿಗೆ ಕರೆ ಮಾಡಿದ್ದೆ. ಆದರೆ ಅವರು ಕರೆ ಸ್ವೀಕರಿಸಲಿಲ್ಲ. ಆಗ ಅವರ ಬಳಿ ಫೋನ್ ಇಲ್ಲ ಎಂದು ನನಗೆ ಗೊತ್ತಾಯಿತು. ಬಳಿಕ ಫಿಸಿಯೋ ಕಮಲೇಶ್ ಜೈನ್ ಗೆ ಫೋನ್ ಮಾಡಿ ವಿಚಾರಿಸಿದೆ. ಕಳೆದ ಎರಡು ದಿನಗಳಿಂದ ನಾನು ನೇರವಾಗಿ ಶ್ರೇಯಸ್ ಜೊತೆ ಮಾತನಾಡುತ್ತಿದ್ದೇನೆ. ಅವರಿಗೆ ಮೆಸೇಜ್ ಮಾಡುತ್ತಿದ್ದೇನೆ. ಅದಕ್ಕೆ ಅವರು ಪ್ರತಿಕ್ರಿಯಿಸುತ್ತಿದ್ದಾರೆ. ಅವರು ಪ್ರತಿಕ್ರಿಯಿಸುತ್ತಿದ್ದಾರೆ ಎಂದರೆ ಅವರು ಈಗ ಸುಧಾರಿಸಿಕೊಂಡಿದ್ದಾರೆ ಎಂದು ಅರ್ಥ. ವೈದ್ಯರನ್ನು ಅವರ ಮೇಲೆ ನಿಗಾ ವಹಿಸಿದ್ದಾರೆ. ಅವರೀಗ ಸುಧಾರಿಸಿಕೊಳ್ಳುತ್ತಿದ್ದಾರೆ ಎಂಬುದು ಒಳ್ಳೆಯ ಸುದ್ದಿ ಎಂದಿದ್ದಾರೆ.