ದುಬೈ: ಏಷ್ಯಾ ಕಪ್ ಕ್ರಿಕೆಟ್ ಫೈನಲ್ ನಲ್ಲಿ ಪಾಕಿಸ್ತಾನವನ್ನು ಸೋಲಿಸಿದ ಬಳಿಕ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮಹತ್ವದ ತೀರ್ಮಾನವೊಂದನ್ನು ಪ್ರಕಟಿಸಿದ್ದಾರೆ. ಇದಕ್ಕೆ ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಏಷ್ಯಾ ಕಪ್ ಕ್ರಿಕೆಟ್ ಎನ್ನುವುದಕ್ಕಿಂತ ಇದು ಭಾರತ-ಪಾಕಿಸ್ತಾನ ನಡುವಿನ ಜಿದ್ದಾಜಿದ್ದಿಗೆ ವೇದಿಕೆಯಾಗಿತ್ತು. ಪಹಲ್ಗಾಮ್ ದಾಳಿ ಬಳಿಕ ಭಾರತ-ಪಾಕಿಸ್ತಾನ ನಡುವಿನ ಮೊದಲ ಪಂದ್ಯಗಳು ಇದಾಗಿತ್ತು. ಹೀಗಾಗಿ ಸಹಜವಾಗಿಯೇ ಈ ಎರಡೂ ತಂಡಗಳ ನಡುವೆ ಜಿದ್ದಾಜಿದ್ದಿ ತಾರಕಕ್ಕೇರಿತ್ತು.
ಏಷ್ಯಾ ಕಪ್ ನ ಲೀಗ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಸೋಲಿಸಿದ ಬಳಿಕ ಮಾತನಾಡಿದ್ದ ಸೂರ್ಯಕುಮಾರ್ ಯಾದವ್ ಗೆಲುವನ್ನು ಪಹಲ್ಗಾಮ್ ಸಂತ್ರಸ್ತರಿಗೆ ಮತ್ತು ಭಾರತೀಯ ಸೇನೆಗೆ ಅರ್ಪಿಸಿದ್ದರು. ಬಳಿಕ ಇದು ವಿವಾದವಾಗಿ ಐಸಿಸಿ ಸೂರ್ಯಕುಮಾರ್ ಯಾದವ್ ಗೆ ಇಂತಹ ಹೇಳಿಕೆ ನೀಡದಂತೆ ಎಚ್ಚರಿಕೆ ನೀಡಿತ್ತು.
ಇದೀಗ ಫೈನಲ್ ಗೆದ್ದ ಬಳಿಕ ಸುದ್ದಿಗೋಷ್ಠಿಯಲ್ಲಿ ಸೂರ್ಯಕುಮಾರ್ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಇದು ವಿವಾದವಾಗುತ್ತದೋ ನನಗೆ ಗೊತ್ತಿಲ್ಲ. ಆದರೂ ಹೇಳುತ್ತಿದ್ದೇನೆ, ಈ ಏಷ್ಯಾ ಕಪ್ ನಲ್ಲಿ ನಾನು ಆಡಿದ ಪಂದ್ಯಗಳ ಅಷ್ಟೂ ಸಂಭಾವನೆಯನ್ನು ಭಾರತೀಯ ಸೇನೆಗೆ ದೇಣಿಗೆ ನೀಡಲಿದ್ದೇನೆ ಎಂದು ಘೋಷಿಸಿದ್ದಾರೆ. ಅವರ ಈ ನಿರ್ಧಾರಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.