Publish Date: Sun, 30 Oct 2022 (08:40 IST)
Updated Date: Sun, 30 Oct 2022 (09:02 IST)
ಪರ್ತ್: ಟಿ20 ವಿಶ್ವಕಪ್ ನಲ್ಲಿ ಇಂದು ಭಾರತ ಮತ್ತು ದ.ಆಫ್ರಿಕಾ ನಡುವೆ ಪಂದ್ಯ ನಡೆಯಲಿದೆ. ಬಿ ಗುಂಪಿನ ಎರಡು ಘಟಾನುಘಟಿಗಳ ನಡುವೆ ಇಂದಿನ ಪಂದ್ಯವಾಗಿರುವುದರಿಂದ ಎಲ್ಲರ ಕುತೂಹಲ ಕೆರಳಿಸಿದೆ.
ಇಂದಿನ ಪಂದ್ಯ ಗೆದ್ದವರು ಬಿ ಗುಂಪಿನಲ್ಲಿ ಅಗ್ರ ಸ್ಥಾನ ಖಚಿತಪಡಿಸಲಿದ್ದಾರೆ. ಭಾರತ ಈಗಾಗಲೇ ಪಾಕಿಸ್ತಾನ, ನೆದರ್ಲ್ಯಾಂಡ್ ವಿರುದ್ಧ ಗೆಲುವು ಸಾಧಿಸಿದೆ. ಅತ್ತ ದ.ಆಫ್ರಿಕಾಗೆ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿದ್ದರೆ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಗೆಲುವು ಸಿಕ್ಕಿತ್ತು.
ಈ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಸಾಧ‍್ಯತೆಯಿಲ್ಲ. ಕೆಎಲ್ ರಾಹುಲ್ ಕಳಪೆ ಫಾರ್ಮ್ ನಲ್ಲಿದ್ದರೂ ಮತ್ತೊಂದು ಅವಕಾಶ ಸಿಗಲಿದೆ. ಬೌಲಿಂಗ್ ನಲ್ಲೂ ಹೆಚ್ಚು ಬದಲಾವಣೆ ಸಾಧ‍್ಯತೆಯಿಲ್ಲ. ಪರ್ತ್ ನ ವೇಗಿಗಳಿಗೆ ನೆರವು ಪಡೆಯುವ ಪಿಚ್ ನಲ್ಲಿ ಈ ಪಂದ್ಯ ನಡೆಯಲಿದೆ. ಹೀಗಾಗಿ ಟೀಂ ಇಂಡಿಯಾ ಹೆಚ್ಚು ಎಚ್ಚರಿಕೆಯಿಂದ ಆಡಬೇಕಾಗುತ್ತದೆ. ಈ ಪಂದ್ಯ ಸಂಜೆ 4.30 ಕ್ಕೆ ಆರಂಭವಾಗಲಿದೆ.
-Edited by Rajesh Patil