Publish Date: Thu, 12 Feb 2026 (09:53 IST)
Updated Date: Thu, 12 Feb 2026 (09:55 IST)
ನವದೆಹಲಿ: ಟಿ20 ವಿಶ್ವಕಪ್ ನಲ್ಲಿ ಇಂದು ಟೀಂ ಇಂಡಿಯಾ ಕ್ರಿಕೆಟ್ ಶಿಶು ನಮೀಬಿಯಾವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ಟೀಂ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಇಲ್ಲಿದೆ.
ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಅಮೆರಿಕಾ ಎದುರು ಗೆಲುವು ಕಂಡಿತ್ತು. ಆದರೆ ಆ ಪಂದ್ಯದಲ್ಲಿ ತಂಡದ ಬ್ಯಾಟಿಂಗ ಹಳ್ಳ ಹಿಡಿದಿತ್ತು. ಭಾರತೀಯ ಬ್ಯಾಟಿಗರ ತಪ್ಪು ಹೊಡೆತಗಳಿಂದಲೇ ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿಯಲ್ಲಿತ್ತು. ಆದರೆ ನಾಯಕ ಸೂರ್ಯಕುಮಾರ್ ಯಾದವ್ ಆ ಅವಮಾನ ತಪ್ಪಿಸಿದ್ದರು.
ಇಂದಿನ ಪಂದ್ಯದಲ್ಲಿ ಮತ್ತೆ ಅಂತಹ ತಪ್ಪುಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳಬೇಕಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ನಲ್ಲಿ ಬದಲಾವಣೆ ಮಾಡಿಕೊಳ್ಳಲಿದೆ. ಅನಾರೋಗ್ಯಕ್ಕೊಳಗಾಗಿರುವ ಅಭಿಷೇಕ್ ಶರ್ಮಾ ಇಂದಿನ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಅವರ ಬದಲು ಸಂಜು ಸ್ಯಾಮ್ಸನ್ ಕಣಕ್ಕಿಳಿಯುವ ಸಾಧ್ಯತೆಯಿದೆ. ಇಶಾನ್ ಕಿಶನ್ ಗೂ ನಿನ್ನೆ ಅಭ್ಯಾಸದ ವೇಳೆ ಗಾಯವಾಗಿದ್ದರೂ ಗಂಭೀರವಲ್ಲ ಎಂದು ಹೇಳಲಾಗಿದೆ.
ಆರಂಭಿಕರಾಗಿ ಇಶಾನ್ ಕಿಶನ್-ಸಂಜು ಸ್ಯಾಮ್ಸನ್ ಕಣಕ್ಕಿಳಿದರೆ ಉಳಿದಂತೆ ಬ್ಯಾಟಿಂಗ್ ನಲ್ಲಿ ಯಾವುದೇ ಬದಲಾವಣೆಯಿರಲ್ಲ. ಕಳೆದ ಪಂದ್ಯದಲ್ಲಿ ಆಡಿದ ಆಟಗಾರರೇ ಆಡಬಹುದು. ಆದರೆ ಬೌಲಿಂಗ್ ನಲ್ಲಿ ಜಸ್ಪ್ರೀತ್ ಬುಮ್ರಾ ಕಮ್ ಬ್ಯಾಕ್ ಮಾಡಿರುವುದರಿಂದ ಅರ್ಷ್ ದೀಪ್ ಸಿಂಗ್ ಸ್ಥಾನ ಬಿಟ್ಟು ಕೊಡಬೇಕಾದೀತು. ಉಳಿದಂತೆ ಯಾವುದೇ ಬದಲಾವಣೆ ಸಾಧ್ಯತೆಯಿಲ್ಲ.