Publish Date: Thu, 27 Oct 2022 (16:01 IST)
Updated Date: Thu, 27 Oct 2022 (16:03 IST)
ಸಿಡ್ನಿ: ಟಿ20 ವಿಶ್ವಕಪ್ ನಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯವನ್ನು ಟೀಂ ಇಂಡಿಯಾ 56 ರನ್ ಗಳಿಂದ ಗೆದ್ದುಕೊಂಡಿದೆ.
ಇದರೊಂದಿಗೆ ಇದುವರೆಗೆ ಆಡಿದ ಎರಡೂ ಪಂದ್ಯಗಳಲ್ಲಿ ಜಯ ಗಳಿಸಿ ಟೀಂ ಇಂಡಿಯಾ ಪಾಯಿಂಟ್ ಟೇಬಲ್ ನಲ್ಲಿ ಅಗ್ರ ಸ್ಥಾನಕ್ಕೇರಿದೆ. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಅರ್ಧಶತಕದ ನೆರವಿನಿಂದ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತು.
ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ನೆದರ್ಲ್ಯಾಂಡ್ಸ್ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 123 ರನ್ ಗಳಿಸಲಷ್ಟೇ ಶಕ್ತವಾಯಿತು. ಟಿಮ್ ಪ್ರಿಂಗಲ್ 20, ಕಾಲಿನ್ 17 ಗಳಿಸಿದರು. ಭಾರತದ ಪರ ಭುವನೇಶ್ವರ್ ಕುಮಾರ್, ಅರ್ಷ್ ದೀಪ್ ಸಿಂಗ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್ ತಲಾ 2 ವಿಕೆಟ್ ಕಬಳಿಸಿದರೆ ಉಳಿದೊಂದು ವಿಕೆಟ್ ಮೊಹಮ್ಮದ್ ಶಮಿ ಪಾಲಾಯಿತು.
-Edited by Rajesh Patil