ಟಿ20 ವಿಶ್ವಕಪ್: ನೆದರ್ಲ್ಯಾಂಡ್ಸ್ ವಿರುದ್ಧ ಟೀಂ ಇಂಡಿಯಾಗೆ ಸುಲಭ ಗೆಲುವು

Webdunia
ಗುರುವಾರ, 27 ಅಕ್ಟೋಬರ್ 2022 (16:01 IST)
ಸಿಡ್ನಿ: ಟಿ20 ವಿಶ್ವಕಪ್ ನಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯವನ್ನು ಟೀಂ ಇಂಡಿಯಾ 56 ರನ್ ಗಳಿಂದ ಗೆದ್ದುಕೊಂಡಿದೆ.

ಇದರೊಂದಿಗೆ ಇದುವರೆಗೆ ಆಡಿದ ಎರಡೂ ಪಂದ್ಯಗಳಲ್ಲಿ ಜಯ ಗಳಿಸಿ ಟೀಂ ಇಂಡಿಯಾ ಪಾಯಿಂಟ್ ಟೇಬಲ್ ನಲ್ಲಿ ಅಗ್ರ ಸ್ಥಾನಕ್ಕೇರಿದೆ. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಅರ್ಧಶತಕದ ನೆರವಿನಿಂದ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ನೆದರ್ಲ್ಯಾಂಡ್ಸ್ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 123 ರನ್ ಗಳಿಸಲಷ್ಟೇ ಶಕ್ತವಾಯಿತು. ಟಿಮ್ ಪ್ರಿಂಗಲ್ 20, ಕಾಲಿನ್ 17 ಗಳಿಸಿದರು. ಭಾರತದ ಪರ ಭುವನೇಶ್ವರ್ ಕುಮಾರ್, ಅರ್ಷ್ ದೀಪ್ ಸಿಂಗ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್ ತಲಾ 2 ವಿಕೆಟ್ ಕಬಳಿಸಿದರೆ ಉಳಿದೊಂದು ವಿಕೆಟ್ ಮೊಹಮ್ಮದ್ ಶಮಿ ಪಾಲಾಯಿತು.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Womens World cup:ತವರಿನಲ್ಲಿ ಇತಿಹಾಸ ನಿರ್ಮಿಸುವ ತವಕದಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಪಡೆ

ಟಿಕೆಟ್ ಎಲ್ಲಿ ಹೋಯ್ತು.. ಮಹಿಳಾ ವಿಶ್ವಕಪ್ ಫೈನಲ್ ಗೆ ಮುನ್ನ ಅಭಿಮಾನಿಗಳಿಂದ ಭಾರೀ ಆಕ್ರೋಶ

ದಬಂಗ್‌ ಡೆಲ್ಲಿ ತಂಡಕ್ಕೆ ಪ್ರೊ ಕಬಡ್ಡಿ ಲೀಗ್‌ ಕಿರೀಟ: ಫೈನಲ್‌ನಲ್ಲಿ ಮುಗ್ಗರಿಸಿದ ಪಟ್ನಾ ಪೈರೇಟ್ಸ್‌

ಕರ್ನಾಟಕ ದತ್ತುಪುತ್ರ ನಾನು.. ಕನ್ನಡ ರಾಜ್ಯೋತ್ಸವಕ್ಕೆ ದಿನೇಶ್ ಕಾರ್ತಿಕ್ ಹೇಳಿದ್ದೇನು Video

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶ್ರೇಯಸ್ ಅಯ್ಯರ್: ಲೇಟೆಸ್ಟ್ ಹೆಲ್ತ್ ಅಪ್ ಡೇಟ್ ಇಲ್ಲಿದೆ

ಮುಂದಿನ ಸುದ್ದಿ
Show comments